ETV Bharat / state

ರೋಹಿತ್ ಚಕ್ರತೀರ್ಥ ಬಂಧಿಸಿ, ಸಚಿವ ನಾಗೇಶ್​ ವಜಾಗೊಳಿಸಿ: ಸಿದ್ದರಾಮಯ್ಯ ಆಗ್ರಹ - karnataka textbook issue

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

siddaramaiah-demands-arrest-of-rohit-chakratheertha
ರೋಹಿತ್ ಚಕ್ರತೀರ್ಥ ಬಂಧಿಸಿ, ಸಚಿವ ನಾಗೇಶ್​ ವಜಾಗೊಳಿಸಿ: ಸಿದ್ದರಾಮಯ್ಯ ಆಗ್ರಹ
author img

By

Published : Jun 10, 2022, 4:11 PM IST

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಸ್ಪಷ್ಟ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್​ಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನು ಕಲುಷಿತಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಸರ್ಕಾರ ಮಕ್ಕಳ ಭವಿಷ್ಯ ಬಲಿಕೊಡಲು ಹೊರಟಿದೆ: ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತಃ ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್​​ಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಇಂತಹ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯ ವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾ ಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರೆಸಿ ಎಂದು ತಿಳಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಕಟಿಬದ್ಧವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲಿತ ನಾಯಕನನ್ನೇ ವಂಚನೆಯಿಂದ ಸೋಲಿಸಿದ್ದು ಆತ್ಮಸಾಕ್ಷಿಯೇ?: ಬಿಜೆಪಿ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.