ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ಸ್ಥಾನದಿಂದ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ರೋಹಿತ್ ಚಕ್ರತೀರ್ಥನನ್ನು ಕಿತ್ತುಹಾಕಿ. ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಕಿಡಿಗೇಡಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಇಂಥ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿರುವ ರಾಜ್ಯ ಬಿಜೆಪಿ ಎಚ್ಚೆತ್ತುಕೊಳ್ಳಲಿ. ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಿ ಎಂದು ಟ್ವೀಟ್ ಮಾಡಿದ್ದಾರೆ.
-
ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು
— Siddaramaiah (@siddaramaiah) May 23, 2022 " class="align-text-top noRightClick twitterSection" data="
ಗೇಲಿ ಮಾಡಿದ
ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು. pic.twitter.com/RLGLIOhTLm
">ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು
— Siddaramaiah (@siddaramaiah) May 23, 2022
ಗೇಲಿ ಮಾಡಿದ
ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು. pic.twitter.com/RLGLIOhTLmನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು
— Siddaramaiah (@siddaramaiah) May 23, 2022
ಗೇಲಿ ಮಾಡಿದ
ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು. pic.twitter.com/RLGLIOhTLm
ಕಾಂಗ್ರೆಸ್ ನಾಯಕರಿಂದ ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳಲು ಹಾಗೂ ಬಿಜೆಪಿ ನಾಯಕರನ್ನು ಮೆಚ್ಚಿಸಲು ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕಾಂಗ್ರೆಸ್ ನಾಯಕರು ಮುಂಬರುವ ದಿನಗಳಲ್ಲಿ ದೊಡ್ಡ ಹೋರಾಟ ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಓದಿ : ಬೆಳಗಾವಿಯಲ್ಲಿದೆ ವಿಶೇಷ ತಳಿ ಮಾವು.. ಏನಿದರ ಸ್ಪೆಷಾಲಿಟಿ ಎಂದರೆ?