ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವರೆಂದು ಸಂಬೋಧಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು ಎಂದು ನಿನ್ನೆ ಶಿಗ್ಗಾವಿಯಲ್ಲಿ ಜೆಪಿ ನಡ್ದಾ ಹೇಳಿಕೆ ನೀಡಿದ್ದರು. ಇದನ್ನು ಟ್ವೀಟ್ ಮೂಲಕ ತೀವ್ರವಾಗಿ ಖಂಡಿಸಿರುವ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ ಅವರು ದೇವರಲ್ಲ, ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆ ಪಿ ನಡ್ದಾ ಅವರೇ ಎಂದು ತಿರುಗೇಟು ನೀಡಿದ್ದಾರೆ.
-
In democracy, people decide the fate of the candidates & the elected representatives can serve them. @narendramodi is not God to bless anyone.
— Siddaramaiah (@siddaramaiah) April 19, 2023 " class="align-text-top noRightClick twitterSection" data="
">In democracy, people decide the fate of the candidates & the elected representatives can serve them. @narendramodi is not God to bless anyone.
— Siddaramaiah (@siddaramaiah) April 19, 2023In democracy, people decide the fate of the candidates & the elected representatives can serve them. @narendramodi is not God to bless anyone.
— Siddaramaiah (@siddaramaiah) April 19, 2023
ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ನೀಡಲಿ ಎಂದು ಹಾರೈಸುತ್ತೇನೆ ಅಂತಾ ಜೆ ಪಿ ನಡ್ಡಾಗೆ ಟಾಂಗ್ ಕೊಟ್ಟಿದ್ದಾರೆ ಸಿದ್ದರಾಮಯ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ ಜೆ ಪಿ ನಡ್ದಾ ಅವರೇ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವನು, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಹೇಳಿದರು.
-
I condemn the statement of @JPNadda about @narendramodi's blessings on Karnataka.
— Siddaramaiah (@siddaramaiah) April 19, 2023 " class="align-text-top noRightClick twitterSection" data="
Looks like he needs lessons on democracy.
">I condemn the statement of @JPNadda about @narendramodi's blessings on Karnataka.
— Siddaramaiah (@siddaramaiah) April 19, 2023
Looks like he needs lessons on democracy.I condemn the statement of @JPNadda about @narendramodi's blessings on Karnataka.
— Siddaramaiah (@siddaramaiah) April 19, 2023
Looks like he needs lessons on democracy.
ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ವಿ ಸೋಮಣ್ಣ ಅವರನ್ನು ರಾಜ್ಯ ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ಹೇಳಿದ್ದರು.
ಓದಿ: ಇಂದು ಭರ್ಜರಿ ರೋಡ್ ಶೋ ಮೂಲಕ ಸಿಎಂ ನಾಮಪತ್ರ ಸಲ್ಲಿಕೆ.. ಬೊಮ್ಮಾಯಿಗೆ ಸುದೀಪ್, ನಡ್ಡಾ ಸಾಥ್
-
All states are equal & have same rights according to the constitution.
— Siddaramaiah (@siddaramaiah) April 19, 2023 " class="align-text-top noRightClick twitterSection" data="
There is no space for dictatorship in democracy.
">All states are equal & have same rights according to the constitution.
— Siddaramaiah (@siddaramaiah) April 19, 2023
There is no space for dictatorship in democracy.All states are equal & have same rights according to the constitution.
— Siddaramaiah (@siddaramaiah) April 19, 2023
There is no space for dictatorship in democracy.
ಜೆಪಿ ನಡ್ಡಾ ಹುಬ್ಬಳ್ಳಿ ಪ್ರವಾಸ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಸಂದರ್ಭದಲ್ಲಿ ಅವರಿಗೆ ಸಾಥ್ ನೀಡಲು ಶಿಗ್ಗಾವಿ ಕ್ಷೇತ್ರಕ್ಕೆ ಜೆ ಪಿ ನಡ್ಡಾ ತೆರಳಿದ್ದರು. ಸಿಎಂ ಬೊಮ್ಮಾಯಿ ತಮ್ಮ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ತೆರೆದ ವಾಹನ ಮೂಲಕ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಈ ವೇಳೆ ಜೆ.ಪಿ. ನಡ್ಡಾ ಮತ್ತು ನಟ ಕಿಚ್ಚ ಸುದೀಪ್, ಶಾಸಕ ಅರವಿಂದ ಬೆಲ್ಲದ, ಲಿಂಗರಾಜ ಪಾಟೀಲ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸುವ ಮುನ್ನ ಶಿಗ್ಗಾವಿಯಲ್ಲಿ ಸಮಾವೇಶ ನಡೆದಿದ್ದು, ಈ ಸಮಾವೇಶದಲ್ಲಿ ನಡ್ಡಾ, ಸಿಎಂ ಬೊಮ್ಮಾಯಿ, ನಟ ಸುದೀಪ್ ಸೇರಿದಂತೆ ಅನೇಕ ಗಣ್ಯರು ಭಾಷಣ ಮಾಡಿದ್ದರು.