ಗಣರಾಜ್ಯೋತ್ಸದ ದಿನವೇ ಬಿಎಸ್ವೈ ಸರ್ಕಾರಕ್ಕೆ ಸಿದ್ದರಾಮಯ್ಯ ಕೊಟ್ಟ ಎಚ್ಚರಿಕೆ ಏನು? - ಸಿದ್ದರಾಮಯ್ಯ ಲೆಟೆಸ್ಟ್ ನ್ಯೂಸ್
ಇಂದು ಸಂಗೊಳ್ಳಿ ರಾಯಣ್ಣ 189ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಆನಂದ್ ರಾವ್ ವೃತ್ತದ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಣ ಬಿಡುಗಡೆ ಮಾಡುವಂತೆ ಅವರು ಆಗ್ರಹಿಸಿದರು.
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಅಧಿವೇಶನದಲ್ಲಿ ಈ ಬಗ್ಗೆ ಗಟ್ಟಿ ಧ್ವನಿಯಲ್ಲಿ ಯಡಿಯೂರಪ್ಪರನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣರ 189ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಇಂದು ಆನಂದ್ ರಾವ್ ವೃತ್ತದ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಾಗ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ 267 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೆವು. ಆದರೆ ಈವರೆಗೆ ಅಭಿವೃದ್ಧಿ ಕೆಲಸಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆಗೆ ಒತ್ತಾಯಿಸಿದ್ದರೂ, ಇನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಇದ್ದಾಗ ಸಂಗೊಳ್ಳಿ ರಾಯಣ್ಣ ಹುಟ್ಟಿದ್ದ, ನೇಣು ಹಾಕಿದ ಸ್ಥಳವನ್ನ ಅಭಿವೃದ್ಧಿ ಪಡಿಸಲಾಗುತ್ತಿತ್ತು. ಸೈನಿಕ ಶಾಲೆಯನ್ನು ಪ್ರಾರಂಭಿಸಲು ಹಣ ಮೀಸಲಿಡಲಾಗಿತ್ತು. 67 ಕೋಟಿ ರೂ. ನಲ್ಲಿ ಮ್ಯೂಸಿಯಂ, ಕೆರೆ, ಸೈನಿಕ ಶಾಲೆಯನ್ನು ಕಟ್ಟುವ ಕೆಲಸ ನಡೆದಿತ್ತು ಎಂದು ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ಇಡಬೇಕು ಎಂಬುದು ನಮ್ಮ ಆಗ್ರಹ. ಇದಕ್ಕೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ, ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
'ಹೌದು ಹುಲಿಯಾ' ವೆಲ್‌ಕಂ!:
ಸಂಗೊಳ್ಳಿ ರಾಯಣ್ಣರ 189ನೇ ಪುಣ್ಯಸ್ಮರಣೆ ಪ್ರಯುಕ್ತ ಆನಂದ್ ರಾವ್ ವೃತ್ತದ ಬಳಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹೌದು ಹುಲಿಯಾ ಎಂದು ಕೂಗಿದರು.
ಸಂಗೊಳ್ಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಮಾಡದಿದ್ದರೆ ಅಧಿವೇಶನದಲ್ಲಿ ಗಟ್ಟಿ ಧ್ವನಿಯಲ್ಲಿ ಯಡಿಯೂರಪ್ಪರನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಸಂಗೊಳ್ಳಿ ರಾಯಣ್ಣ 189ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಆನಂದ್ ರಾವ್ ವೃತ್ತದ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಾಗ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಂಬಂಧ 267 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೆವು. ಆದರೆ ಈವರೆಗೆ ಅಭಿವೃದ್ಧಿ ಕೆಲಸಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿರಲಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಲು ಹೇಳಿದ್ದೆ, ಇನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಮಾಡದಿದ್ದರೆ ಅಸೆಂಬ್ಲಿಯಲ್ಲಿ ಗಟ್ಟಿ ಧ್ವನಿಯಲ್ಲಿ ಯಡಿಯೂರಪ್ಪ ರನ್ನ ಎಚ್ಚರಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಇದ್ದಾಗ ಸಂಗೊಳ್ಳಿ ರಾಯಣ್ಣ ಹುಟ್ಟಿದ ನೇಣು ಹಾಕಿದ ಸ್ಥಳವನ್ನ ಅಭಿವೃದ್ಧಿ ಪಡಿಸಲಾಗುತ್ತಿದೆ. ಸೈನಿಕ ಶಾಲೆಯನ್ನು ಪ್ರಾರಂಭಿಸಲು ಹಣ ಮೀಸಲು ಮಾಡಲಾಗಿದೆ. 67 ಕೋಟಿ ರೂ. ನಲ್ಲಿ ಮ್ಯೂಸಿಯಂ, ಕೆರೆ, ಸೈನಿಕ ಶಾಲೆಯನ್ನು ಕಟ್ಟುತ್ತಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ಇಡಬೇಕು ಎಂಬುದು ನಮ್ಮ ಆಗ್ರಹ. ಇದಕ್ಕೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
'ಹೌದು ಹುಲಿಯಾ' ವೆಲ್‌ಕಂ!:
ಸಂಗೊಳ್ಳಿ ರಾಯಣ್ಣರ 189ನೇ ಪುಣ್ಯಸ್ಮರಣೆ ಪ್ರಯುಕ್ತ ಆನಂದ್ ರಾವ್ ವೃತ್ತದ ಬಳಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಿದ್ದರಾಮಯ್ಯ ಆಗಮಿಸುತ್ತಿದ್ದ ಹಾಗೇ ಅಭಿಮಾನಿಗಳು ಹೌದು ಹುಲಿಯಾ ಎಂದು ಕೂಗಲು ಪ್ರಾರಂಭಿಸಿದರು.
ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಅಭಿಮಾನಿಗಳಿಂದ ಹರ್ಷೋದ್ಘಾರ ಮುಗಿಲು ಮುಟ್ಟಿತು. ಭಾಷಣ ಆರಂಭಿಸುತ್ತಿದ್ದ ಹಾಗೇ ಅಭಿಮಾನಿಗಳು ಹೌದು ಹುಲಿಯಾ ಎಂದು ಘೋಷಣೆ ಕೂಗಿ ಕೂಗಿ ಕೇಕೇ ಹಾಕಿದರು.Conclusion: