ಬೆಂಗಳೂರು : ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಕಚೇರಿಗೆ ಆಗಮಿಸಿದ್ದು, ಇಡೀ ದಿನ ಕಚೇರಿಯಲ್ಲಿರುವ ಅವರು ಕೊರೊನಾ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಮೊದಲಿಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಅದೇ ರೀತಿ, ಇತರ ಇಲಾಖೆಯ ಅಧಿಕಾರಿಗಳಿಂದ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.