ETV Bharat / state

ಬಿಎಸ್​​ವೈ ಜೈಲು ಸೇರಿದ್ದೇಕೆ ಎನ್ನುವುದು ನೆನಪಿರಲಿ: ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ 'ಜಾತ್ರೆ'ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ.

siddaramaiah
ಸಿದ್ದರಾಮಯ್ಯ
author img

By

Published : Sep 12, 2022, 8:22 AM IST

ಬೆಂಗಳೂರು: ಬಿಜೆಪಿ ಜನಸ್ಪಂದನ ಯಾತ್ರೆಯನ್ನು ಧಮ್ಮಿದ್ದರೆ ಹೆಮ್ಮೆಟ್ಟಿಸಿ ಎಂದು ಸವಾಲು ಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸುವುದಿಲ್ಲ. ಈ ರೀತಿ ಮಾತನಾಡಿಯೇ ಬಿ.ಎಸ್.ಯಡಿಯೂರಪ್ಪ ಜೈಲು ಸೇರಿದ್ದರು ಎನ್ನುವುದು ನಿಮಗೆ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

  • ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ @BJP4Karnataka ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ @BSYBJP ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ. 4/8#ಜನಮರ್ದನ_ಸರ್ಕಾರ

    — Siddaramaiah (@siddaramaiah) September 11, 2022 " class="align-text-top noRightClick twitterSection" data=" ">

ಸರಣಿ ಟ್ವೀಟ್ ಮೂಲಕ ಸಿಎಂ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ, 'ಜನಮರ್ದನ ಅಲ್ಲಲ್ಲ, ಜನಸ್ಪಂದನ' ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ 'ಜಾತ್ರೆ'ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಇದೊಂದು ಜನ ಮರ್ದನ ಸರ್ಕಾರ ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ ಎಂದು ಸವಾಲೆಸೆದಿದ್ದಾರೆ.

ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ರಾಜ್ಯ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ ಎಂದಿದ್ದಾರೆ.

ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕರು ಧಮ್ಕಿ ಹಾಕುತ್ತಲೇ ಇದ್ದಾರೆ. ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ. ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ರಾಜ್ಯ ಬಿಜೆಪಿ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ. ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ ಬೊಮ್ಮಾಯಿ ಎಂದಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ? ಸಿಎಂ ಬಸವರಾಜ ಬೊಮ್ಮಾಯಿ ಅವರೇ?. ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ. ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ. ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬಸವರಾಜ ಬೊಮ್ಮಾಯಿ ಅವರೇ?. ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಂ, ಮಂದಿರ ಮಸೀದಿ, ಹಿಜಾಬ್ – ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದಿದ್ದಾರೆ.

ಸಮಾವೇಶದಲ್ಲಿ ವೈಫಲ್ಯಗಳ ಪ್ರಸ್ತಾವ ಏಕಿಲ್ಲ: ರಾಜ್ಯ ಬಿಜೆಪಿ ಸರ್ಕಾರ ಸದಾ ಖುಷಿ ಭರವಸೆಗಳನ್ನು ಮಾತ್ರ ನೀಡುತ್ತಾ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡುವುದರಲ್ಲಿ ಬಿಜೆಪಿ ನಾಯಕರು ಹಾಗೂ ಸರ್ಕಾರ ನಿರತವಾಗಿದೆ. ಇದೀಗ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸ್ಮಾರ್ಟ್ ಫೋನ್ ನೀಡುವ ಹೇಳಿಕೆ ಸಹ ಸುಳ್ಳು ಕಾಂಗ್ರೆಸ್​​ ಆರೋಪ ಮಾಡಿದೆ.

ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತೇವೆ ಎಂಬ ಭರವಸೆಯನ್ನು ಬಿಜೆಪಿ ನೀಡಿತ್ತು. ಸ್ಮಾರ್ಟ್ ಫೋನ್ ಹೋಗಲಿ ಅನ್ನಭಾಗ್ಯದ ಅಕ್ಕಿಯನ್ನೂ ಸಮರ್ಪಕವಾಗಿ ನೀಡಲಾಗದ ಸ್ಥಿತಿಗೆ ತಲುಪಿದೆ ಸರ್ಕಾರ. 'ಧಮ್ಮು' ಇರುವ ಮುಖ್ಯಮಂತ್ರಿಗಳೇ, ನಿನ್ನೆಯ ಸಮಾವೇಶದಲ್ಲಿ ಈ ವೈಫಲ್ಯಗಳಿಗೆ ಉತ್ತರ ಹೇಳಲಿಲ್ಲವೇಕೆ? ಎಂದು ಪ್ರಶ್ನಿಸಿದೆ.

ಸರ್ಕಾರದ ಸಾಧನ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ಭರಿತರಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಆರಂಭಿಸಿರುವ ದಿಗ್ವಿಜಯ ಯಾತ್ರೆಯನ್ನು ತಾಕತ್ತಿದ್ದರೆ ನಿಲ್ಲಿಸಿ. ನಿಮಗೆ ಧಮ್ ಇದ್ದರೆ ಅದನ್ನು ತಡೆಯಿರಿ ಎಂದು ಸವಾಲು ಹಾಕಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಇದಕ್ಕೆ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ತಾಕತ್ತಿದ್ದರೆ ನಮ್ಮ ಗೆಲುವು ತಡೆಯಿರಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಕಾಂಗ್ರೆಸ್​​ಗೆ ಸಿಎಂ ಸವಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.