ETV Bharat / state

ಸಿದ್ದರಾಮಯ್ಯ ಕುರುಬ ಸಮಾಜದ ಓಲೈಕೆ ಮಾಡುತ್ತಿಲ್ಲ: ಸಚಿವ ಮಹಾದೇವಪ್ಪ - ದಸರಾ ವೆಬ್​ಸೈಟ್​ಗೆ ಚಾಲನೆ

''ಸಿದ್ದರಾಮಯ್ಯ ಕುರುಬ ಸಮಾಜದ ಓಲೈಕೆ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಸಾಮಾಜಿಕ ತಳಹದಿಯ ಮೇಲೆ ಕಾರ್ಯ ನಿರ್ವಹಿಸುತ್ತಿದೆ'' ಎಂದು ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಸಮರ್ಥಿಸಿಕೊಂಡಿದ್ದಾರೆ.

Minister Mahadevappa
ಸಿದ್ದರಾಮಯ್ಯ ಕುರುಬ ಸಮಾಜದ ಓಲೈಕೆ ಮಾಡುತ್ತಿಲ್ಲ: ಸಚಿವ ಮಹಾದೇವಪ್ಪ
author img

By ETV Bharat Karnataka Team

Published : Oct 3, 2023, 6:30 PM IST

ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಮಾತನಾಡಿದರು.

ಮೈಸೂರು: ''ಸರ್ಕಾರ ಸಾಮಾಜಿಕ ತಳಹದಿಯ ಮೇಲೆ ಕಾರ್ಯ ನಿರ್ವಹಿಸುತ್ತಿದೆ. ಸಚಿವ ಸಂಪುಟದಲ್ಲಿ ಎಲ್ಲಾ ಸಮಾಜಗಳಿಗೂ ಆದ್ಯತೆ ನೀಡಲಾಗಿದೆ. ಸಂಪುಟದಲ್ಲಿ 7 ಮಂದಿ ವೀರಶೈವ ಲಿಂಗಾಯತ ಸಚಿವರಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಸಮುದಾಯವನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಅವರು ಕೇವಲ ಕುರುಬ ಸಮಾಜವನ್ನು ಮಾತ್ರ ಓಲೈಕೆ ಮಾಡುತ್ತಿಲ್ಲ'' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ಹೇಳಿದರು.

ಮೈಸೂರು ಅರಮನೆಯ ಆಡಳಿತ ಮಂಡಳಿಯ ಕಚೇರಿಯಲ್ಲಿ ಇಂದು (ಮಂಗಳವಾರ) ದಸರಾದ ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ ಮಾಡಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳನ್ನು ಕಾಂಗ್ರೆಸ್ ಸರ್ಕಾರದಲ್ಲಿ ಕಡೆಗಣನೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.

''ಹುಬ್ಬಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳನ್ನು ವಾಪಸ್ ಪಡೆಯುವ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ತೀರ್ಮಾನ ಮಾಡುತ್ತದೆ. ಯಾವ್ಯಾವ ರಾಜಕೀಯ ಪ್ರೇರಿತ ಕೇಸ್​ಗಳು ಎಂಬ ಬಗ್ಗೆ ಪರಿಶೀಲನೆ ನಡೆಸಿ, ಅವುಗಳನ್ನು ಕ್ಯಾಬಿನೆಟ್ ಸಬ್ ಕಮಿಟಿ ವಾಪಸ್ ಪಡೆಯಲು ಶಿಫಾರಸು ನೀಡುತ್ತದೆ. ಮೆರಿಟ್ ಆಧಾರದ ಮೇಲೆ ಕ್ಯಾಬಿನೆಟ್ ಕಮಿಟಿ ಅದನ್ನು ತೀರ್ಮಾನ ಮಾಡುತ್ತದೆ. ಕ್ರಿಮಿನಲ್ ಹಿನ್ನೆಲೆಯುಳ್ಳ ಕೇಸ್​ಗಳನ್ನು ವಾಪಸ್ ಪಡೆಯುವುದಿಲ್ಲ'' ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದರು.

ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆಯಾಗಬೇಕು: ''ಬಿಹಾರದಲ್ಲಿ ಅಲ್ಲಿನ ಮುಖ್ಯಮಂತ್ರಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾತಿ ಗಣತಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಸಮಾಜದಲ್ಲಿ ಪ್ರತಿಯೊಂದು ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯಲು ಜಾತಿ ಗಣತಿ ವರದಿ ಬಿಡುಗಡೆ ಮಾಡಲೇಬೇಕು'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಸರಾ ವೆಬ್​ಸೈಟ್​ಗೆ ಚಾಲನೆ: ದಸರಾ ಉದ್ಘಾಟನೆಗೆ ಇನ್ನೂ 12 ದಿನ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯ ಆವರಣದಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ‌. ಎಚ್.ಸಿ. ಮಹಾದೇವಪ್ಪ ಅವರು, ದಸರಾ ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ ಹಾಗೂ ದಸರಾ ವೆಬ್​ಸೈಟ್​ಗೆ ಚಾಲನೆ ನೀಡಿದರು. ''ಈ ಬಾರಿ 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದ್ದು, ಆದ್ದರಿಂದ ಈ ಬಾರಿ ದಸರಾವನ್ನು ಅದ್ಧೂರಿಯೂ ಅಲ್ಲ, ಸರಳವೂ ಅಲ್ಲ, ಸಾಂಪ್ರದಾಯಿಕವಾಗಿ ಮಾಡಲು ತೀರ್ಮಾನಿಸಲಾಗಿದೆ'' ಎಂದು ಸಚಿವ ಮಹದೇವಪ್ಪ ಮಾಹಿತಿ ನೀಡಿದರು.

''ಅ.15 ರಂದು ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದು, ಅಂದೇ ದಸರಾದ ವಿವಿಧ ಕಾರ್ಯಕ್ರಮಗಳಿಗೂ ಚಾಲನೆ ಸಿಗಲಿದೆ. ಆದರೆ, ಕಳೆದ ಬಾರಿಗಿಂತ ಕಡಿಮೆ ಖರ್ಚಿನಲ್ಲಿ ದಸರಾ ಮಾಡಲಿದ್ದೇವೆ. ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ ರೂ. ಬಿಡುಗಡೆ ಆಗಿದೆ. 18 ಸಮಿತಿಗಳನ್ನು ರಚನೆ ಮಾಡಲಾಗಿದೆ. ಜೊತೆಗೆ ಅಧಿಕಾರೇತರ ಉಪಸಮಿತಿಗಳನ್ನು ಮಾಡುತ್ತೇವೆ. ಈ ಬಾರಿ ದಸರಾಗೆ ಹೆಚ್ಚು ಆಯೋಜಕರನ್ನು ಹುಡುಕಿ ದಸರಾ ಮಾಡುತ್ತೇವೆ. ಈ ಬಾರಿ ದಸರಾದಲ್ಲಿ ಯುವ ಸಂಭ್ರಮ, ಯುವ ದಸರಾ, ಏರ್ ಶೋ ಎಲ್ಲಾ ಇರಲಿದೆ'' ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸಚಿವ ಶಿವರಾಜ್ ತಂಗಡಗಿ ತಿರುಗೇಟು: ''ಆಡಳಿತದಲ್ಲಿ ಜಾತಿವಾರು ಅಧಿಕಾರಿಗಳನ್ನು ಹಾಕಲು ಸಾಧ್ಯವಿಲ್ಲ'' ಎಂದು ಸಚಿವ ಶಿವರಾಜ್ ತಂಗಡಗಿ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ''ಇನ್ನೂ ಚುನಾವಣೆ ಬಂದಾಗ ಬಿಜೆಪಿಯವರಿಗೆ ಹಿಂದೂಗಳು ನೆನಪಾಗುತ್ತಾರೆ. ಬಿಜೆಪಿ ಸರ್ಕಾರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ಕಾರಿನಿಂದ ಇಳಿಸಿ ಓಡಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಹತ್ಯೆಗಳು ನಡೆದಿಲ್ಲವೇ'' ಎಂದು ಅವರು ಪ್ರಶ್ನಿಸಿದರು.

ಶಿವಮೊಗ್ಗ ಗಲಾಟೆ- ತಪ್ಪಿತಸ್ಥರ ವಿರುದ್ಧ ಕ್ರಮ: ಶಿವಮೊಗ್ಗ ಗಲಾಟೆ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಸಂಕ್ರಾಂತಿ ನಂತರ ಸರ್ಕಾರ ಬೀಳುತ್ತದೆ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಸಿ ಪಿ ಯೋಗೇಶ್ವರ್​ ಹಗಲು ಕನಸು ಕಾಣುತ್ತಿದ್ದಾರೆ. ಸರ್ಕಾರ ಸುಭದ್ರವಾಗಿದೆ. ಜನರಿಗೆ ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ಜನ ಹೇಗೆ ಉತ್ತರ ಕೊಟ್ಟಿದ್ದಾರೋ, ಅದೇ ರೀತಿ ಲೋಕಸಭೆ ಚುನಾವಣೆಯಲ್ಲೂ ತಕ್ಕ ಉತ್ತರವನ್ನೇ ನೀಡುತ್ತಾರೆ ಎಂದು ಸಚಿವ ತಂಗಡಗಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್​ಗೆ ಡಿಕೆಶಿ ಪತ್ರ.. ಯಾರೇ ಪತ್ರ ಬರೆದರೂ ತಕ್ಷಣ ವಾಪಸ್ ತೆಗೆದುಕೊಳ್ಳಲ್ಲ: ಸಚಿವ ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.