ETV Bharat / state

ಕೋವಿಡ್ ಲಸಿಕೆ.. ವಸ್ತುಸ್ಥಿತಿ ವಿವರಿಸಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಪತ್ರ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರಶ್ನೆ ಕೇಳುವುದು, ಸಲಹೆ ನೀಡುವುದು, ಪ್ರತಿಭಟಿಸುವುದು ಜನರ ಹಕ್ಕು. ಜನರ ದನಿಗೆ ಕಿವಿಗೊಟ್ಟು ಕೆಲಸ ಮಾಡಬೇಕಾಗಿರುವುದು ಸರ್ಕಾರಗಳ ಕರ್ತವ್ಯ. ಪ್ರತಿಪಕ್ಷಗಳು, ನಾಡಿನ ಜನರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಉತ್ತರ ಹೇಳಬೇಕಾಗಿರುವುದೂ ಸರ್ಕಾರದ ಕರ್ತವ್ಯ..

siddaramaiah
siddaramaiah
author img

By

Published : May 22, 2021, 3:23 PM IST

ಬೆಂಗಳೂರು : ಕೋವಿಡ್ ಲಸಿಕೆಗಳನ್ನು ಸಮರ್ಪಕವಾಗಿ ನೀಡಲಾಗದೆ, ಸಮಸ್ಯೆಗಳನ್ನು ನಿರ್ವಹಿಸಲಾಗದೇ ಜನರ ಮಾರಣಹೋಮಕ್ಕೆ ಕಾರಣವಾಗಿರುವ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಅಪರಾಧಿ ಸ್ಥಾನದಲ್ಲಿ ನಿಂತಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೋವಿಡ್ ಲಸಿಕೆ ವಿತರಣೆ ಸಂಬಂಧ ವಸ್ತುಸ್ಥಿತಿ ವಿವರಿಸಿ ರಾಜ್ಯದ ಜನತೆಗೆ ಪತ್ರ ಬರೆದಿರುವ ಅವರು, ಈ ಅಪರಾಧ ಸಾಧಾರಣವಲ್ಲ.

ತನ್ನದೇ ದೇಶದ ಮಕ್ಕಳಿಗೆ ಲಸಿಕೆ ನಿರಾಕರಿಸಿ ಲಕ್ಷಾಂತರ ಜನರನ್ನು ಕೊಂದ ಕೊಲೆಗಾರರು ಹೊರಬೇಕಾದ ಅಪರಾಧ ಅದು. ಸ್ವತಃ ಅಪರಾಧಿ ಸ್ಥಾನದಲ್ಲಿ ನಿಂತಿರುವ ಬಿಜೆಪಿಯು ಈಗ ದೇಶದ ನಾಗರಿಕರಿಗೆ ಲಸಿಕೆಯ ಕುರಿತು ಕಾಂಗ್ರೆಸ್ ಮುಖಂಡರು ಅಪಪ್ರಚಾರ ಮಾಡಿದರು.

ಅದಕ್ಕಾಗಿ ಜನ ಲಸಿಕೆ ಹಾಕಿಸಿಕೊಳ್ಳಲಿಲ್ಲ ಎಂದು ಹೇಳಿಕೆ ನೀಡಲಾರಂಭಿಸಿದ್ದಾರೆ. ನಿಜವಾದ ಸಂಗತಿಗಳನ್ನು ಮರೆಮಾಚಲು ಪ್ರಾರಂಭಿಸಿದ್ದಾರೆ. ಗೊಬೆಲ್ಸ್ ಪರಂಪರೆಯವರು ಮತ್ತು ಅವರ ಅಧಿಕೃತ, ಅನಧಿಕೃತ ವಕ್ತಾರರುಗಳೆಲ್ಲ ಸೇರಿಕೊಂಡು ಸುಳ್ಳನ್ನು ಉತ್ಪಾದನೆ ಮಾಡಿ ಜನರಿಗೆ ಹಂಚಲು ಹೊರಟಿದ್ದಾರೆ.

ಕೆಲವು ಮಾಧ್ಯಮಗಳನ್ನೂ ಕೂಡ ಈ ಗೊಬೆಲ್ಸ್ ಪರಂಪರೆಯವರೇ ನಿಯಂತ್ರಿಸುತ್ತಿರುವುದರಿಂದ ಸತ್ಯ ಏನು ಎಂದು ಜನರಿಗೆ ತಿಳಿಹೇಳಬೇಕಾದ ಅವರೂ ಸಹ ನವಿಲು ಕಪ್ಪಗಿದೆ, ಕಾಗೆ ಬೆಳ್ಳಗಿದೆ ಎಂದು ಹೇಳುವ ಮೂಲಕ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದಿದ್ದಾರೆ.

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಅಥವಾ ಜನತೆ ಉತ್ತರಿಸಬೇಕಾಗಿಲ್ಲ. ಆಡಳಿತ ನಡೆಸುವ ಬಿಜೆಪಿಯು ಈಗ ದೇಶದ ಜನರಿಗೆ ಉತ್ತರಿಸಬೇಕಾಗಿದೆ. ದೇಶದ ಜನ ಪ್ರಶ್ನೆ ಕೇಳುತ್ತಿದ್ದಾರೆ. ಜನರ ಪ್ರಶ್ನೆಗಳಿಗೆ ಕಾಂಗ್ರೆಸ್ ಪಕ್ಷ ದನಿಗೂಡಿಸಿದೆ ಅಷ್ಟೇ..

ಪ್ರಶ್ನೆ ಕೇಳುವುದು, ಸಲಹೆ ನೀಡುವುದು, ಪ್ರತಿಭಟಿಸುವುದು ಜನರ ಹಕ್ಕು. ಜನರ ದನಿಗೆ ಕಿವಿಗೊಟ್ಟು ಕೆಲಸ ಮಾಡಬೇಕಾಗಿರುವುದು ಸರ್ಕಾರಗಳ ಕರ್ತವ್ಯ. ಪ್ರತಿಪಕ್ಷಗಳು, ನಾಡಿನ ಜನರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಉತ್ತರ ಹೇಳಬೇಕಾಗಿರುವುದೂ ಸರ್ಕಾರದ ಕರ್ತವ್ಯವೇ ಎಂದಿರುವ ಸಿದ್ದರಾಮಯ್ಯ, ಸರ್ಕಾರಕ್ಕೆ ಒಟ್ಟು 27 ಪ್ರಶ್ನೆಗಳನ್ನು ಕೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.