ETV Bharat / state

ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ - ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ನೇಮಿಸಲು ಎಐಸಿಸಿ ಅಧ್ಯಕ್ಷರಿಗೆ ಅಧಿಕಾರ ನೀಡುವ ಏಕ ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದರು.

siddaramaiah-moved-resolution-authorising-aicc-president-to-appoint-a-new-leader-of-clp-party
ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ
author img

By

Published : May 14, 2023, 11:06 PM IST

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷವು ಇಂದು ಶಾಸಕಾಂಗ ಸಭೆಯಲ್ಲಿ ಎರಡು ನಿರ್ಣಯಗಳನ್ನು ಕೈಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಶಾಸಕಾಂಗ ಪಕ್ಷದ ಸಭೆಯ ಮಧ್ಯೆ ಆಗಮಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಎರಡು ನಿರ್ಣಯವನ್ನು ಕೈಗೊಳ್ಳಲಾಗಿದ್ದು ಮೊದಲ ನಿರ್ಣಯವನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದರು.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅತ್ಯುತ್ತಮ ಬಹುಮತ ನೀಡಿದ 6.5 ಕೋಟಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದರು. ಇದಲ್ಲದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪಕ್ಷದ ರಾಷ್ಟ್ರೀಯ ವರಿಷ್ಠರಾದ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಹಾಗೂ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಭರವಸೆ ನೀಡಿದ್ದು ರಾಜ್ಯದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಸಾಗುವ ಭರವಸೆಯನ್ನು ನೀಡಿದ್ದಾರೆ.

ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದೇಶಾದ್ಯಂತ ಕಾಪಾಡಲು ನಾವು ಬದ್ಧ ಎಂಬುದನ್ನು ಈ ನಿರ್ಣಯದ ಮೂಲಕ ಡಿಕೆ ಶಿವಕುಮಾರ್ ತಿಳಿಸಿದರು. ಈ ನಿರ್ಣಯವನ್ನು ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ ಬಿ ಪಾಟೀಲ್ ಬೆಂಬಲಿಸಿದರು. ಈ ನಿರ್ಣಯಕ್ಕೆ ಬಿ ಕೆ ಹರಿಪ್ರಸಾದ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ತಮ್ಮ ಅನುಮೋದನೆ ವ್ಯಕ್ತಪಡಿಸಿದ್ದರು ಎಂದರು.

ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ನಿರ್ಣಯವನ್ನು ಮಂಡಿಸಿದರು. ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಜವಾಬ್ದಾರಿಯನ್ನು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿವೇಚನೆಗೆ ಬಿಡುವ ಒಂದು ಸಾಲಿನ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದರು ಎಂದರು.

ಇದಾದ ಬಳಿಕ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ವಹಿಸಿದರು. ಕೇಂದ್ರದಿಂದ ಆಗಮಿಸಿರುವ ಮೂವರು ವೀಕ್ಷಕರ ಜೊತೆ ಪ್ರತಿಯೊಬ್ಬ ಶಾಸಕರನ್ನು ಪ್ರತ್ಯೇಕವಾಗಿ ಸಂದರ್ಶಿಸಿ ಅವರ ಅಭಿಪ್ರಾಯ ಸಂಗ್ರಹಿಸುವ ಜವಾಬ್ದಾರಿ ನೀಡಿದ್ದಾರೆ. ಊಟದ ಬಳಿಕ ಈ ಕಾರ್ಯವನ್ನು ವೀಕ್ಷಕರು ಆರಂಭಿಸಲಿದ್ದಾರೆ. ಈ ಮಾಹಿತಿಯನ್ನು ಸಂಗ್ರಹಿಸಿದ ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾತನಾಡಿ, ಇಂದು ರಾತ್ರಿಯ ಒಳಗೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿ ತಮ್ಮ ಊರುಗಳಿಗೆ ಹಿಂದಿರುಗಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ನಾವು ಇಂದು ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದು ಅದನ್ನು ಪಕ್ಷದ ವೀಕ್ಷಕರು ಹೈಕಮಾಂಡ್​​ಗೆ ತಲುಪಿಸುವ ಕಾರ್ಯ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಸಿಎಂ ಆಯ್ಕೆ ನಿರ್ಧಾರ ಖರ್ಗೆ ಹೆಗಲಿಗೆ.. ಸಿಎಲ್​ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.