ETV Bharat / state

ಬಿಎಸ್​​​ವೈ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?: ಸಿದ್ದರಾಮಯ್ಯ ಪ್ರಶ್ನೆ

author img

By

Published : Apr 13, 2021, 12:49 PM IST

ಸಾರಿಗೆ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗಡುಗಿದ್ದಾರೆ.

Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕಲು ಮುಂದಾಗಿದೆ. ಇದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೆಎಸ್ಆರ್​ಟಿಸಿ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ ಆಗಿದೆ. ರಾಜ್ಯದ ಬಹಳ ಕಡೆಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮುಷ್ಕರ ನಿರತ ಕೆಎಸ್ಆರ್​ಟಿಸಿ ನೌಕರರನ್ನು ವಾರಂಟ್ ಇಲ್ಲದೇ ಬಂಧಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು ಮನೆ ಖಾಲಿ ಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್ಆರ್​ಟಿಸಿ ನೌಕರರನ್ನು ಯಡಿಯೂರಪ್ಪ ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಸಿಎಂ ಹಠಕ್ಕೆ ಬೀಳದೇ ತಕ್ಷಣ ಮುಷ್ಕರ ನಿರತ ಕೆಎಸ್ಆರ್​ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.