ETV Bharat / state

ತಲಾ ಎರಡು ಬಾರಿ ಡಿಸಿಎಂ, ಪ್ರತಿಪಕ್ಷ ನಾಯಕ, ಸಿಎಂ ಸ್ಥಾನ: ಅಪರೂಪದ ರಾಜಕಾರಣಿ ಸಿದ್ದರಾಮಯ್ಯ - ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ

ನಾಲ್ಕು ದಶಕದ ರಾಜಕಾರಣದಲ್ಲಿ ಯಾವುದೇ ಸರ್ಕಾರವಿದ್ದರೂ 30 ವರ್ಷಗಳ ಕಾಲ ಸಾಂವಿಧಾನಿಕ ಹುದ್ದೆಯಲ್ಲಿಯೇ ಮುಂದುವರೆದುಕೊಂಡು ಬಂದಿರುವ ಅಪರೂಪದ ರಾಜಕಾರಣಿ ಸಿದ್ದರಾಮಯ್ಯ ಎನ್ನಬಹುದಾಗಿದೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : May 18, 2023, 3:30 PM IST

Updated : May 18, 2023, 3:49 PM IST

ಬೆಂಗಳೂರು : ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಹಿರಿಯ ಸಮಾಜವಾದಿ ಸಿದ್ಧಾಂತದ ನಾಯಕ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ನಾಲ್ಕು ದಶಕದ ರಾಜಕಾರಣದಲ್ಲಿ ಎರಡು ಬಾರಿ ಡಿಸಿಎಂ, ಎರಡು ಬಾರಿ ಸಿಎಂ, ಎರಡು ಬಾರಿ ಪ್ರತಿಪಕ್ಷ ನಾಯಕ ಹಾಗು ಐವರು ಮುಖ್ಯಮಂತ್ರಿಗಳ ಸಂಪುಟದಲ್ಲಿ ಕೆಲಸ ಮಾಡಿದ ಅಪರೂಪದ ರಾಜಕಾರಣಿಯಾಗಿದ್ದಾರೆ. ಈವರೆಗೂ ಸಾಂವಿಧಾನಿಕ ಹುದ್ದೆಯಿಂದ ದೂರ ಉಳಿದದ್ದು, ಕೇವಲ ಎರಡು ಬಾರಿ ಮಾತ್ರ ಎನ್ನುವುದು ವಿಶೇಷ. ಈ ಕುರಿತ ವರದಿ ಇಲ್ಲಿದೆ.

ಮೊದಲ ಬಾರಿ ವಿಧಾನಸಭೆ ಪ್ರವೇಶ ಮಾಡಿದಂದಿನಿಂದ ಇಲ್ಲಿಯವರೆಗಿನ 40 ವರ್ಷದ ರಾಜಕೀಯ ಪಯಣದಲ್ಲಿ ಸಿದ್ದರಾಮಯ್ಯ ಅಧಿಕಾರದಿಂದ ದೂರ ಇದ್ದದ್ದು ಕೇವಲ ಎರಡು ಬಾರಿ ಮಾತ್ರ. ಅದು ಕೂಡ ಅವರು ಸೋತ ಕಾರಣದಿಂದಾಗಿ 1989 ಮತ್ತು 1999 ರಲ್ಲಿ ಎರಡು ಬಾರಿ ಯಾವುದೇ ಅಧಿಕಾರ ಇಲ್ಲದೆ ಇದ್ದರು. ಇನ್ನುಳಿದಂತೆ ಪ್ರತಿ ಬಾರಿಯೂ ಒಂದಲ್ಲಾ ಒಂದು ಸಾಂವಿಧಾನಿಕ ಹುದ್ದೆಯಲ್ಲಿಯೇ ಇದ್ದುಕೊಂಡು ರಾಜಕಾರಣ ಮಾಡಿಕೊಂಡು ಬಂದಿದ್ದಾರೆ.

ಸಿದ್ದರಾಮಯ್ಯ ಸಿದ್ದರಾಮಯ್ಯ
ಸಿದ್ದರಾಮಯ್ಯ

ಕಾಂಗ್ರೆಸ್​ನಿಂದಲೇ ಎರಡನೇ ಬಾರಿ ಸಿಎಂ: 1983ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಲೋಕದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗುತ್ತಾರೆ. ಮೊದಲ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಬೆಂಬಲ ನೀಡಲು ರಾಮಕೃಷ್ಣ ಹೆಗಡೆ ಸರ್ಕಾರವನ್ನು ಬೆಂಬಲಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗುತ್ತಾರೆ. ಇದು ಕೂಡ ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರ ಆರಂಭಿಕ ಅಧಿಕಾರ ಎನ್ನಬಹುದಾಗಿದೆ. ಮೊದಲ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಬೆಂಬಲಿಸಿದ್ದ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ನಿಂದಲೇ ಎರಡನೇ ಬಾರಿ ಸಿಎಂ ಆಗುತ್ತಿರುವುದು ವಿಶೇಷ.

ಹೆಚ್ ಡಿ ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವ: ಇನ್ನು 1985ರಲ್ಲಿ ಎರಡನೇ ಬಾರಿಗೆ ಜನತಾ ಪಕ್ಷದಿಂದ ಸ್ಪರ್ಧಿಸಿ ವಿಧಾನಸಭೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗುತ್ತಾರೆ. ರಾಮಕೃಷ್ಣ ಹೆಗಡೆ ಸಂಪುಟ ಹಾಗು ಎಸ್ ಆರ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗುತ್ತಾರೆ. 1989 ರಲ್ಲಿ ಮೊದಲ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿ ಅಧಿಕಾರದಿಂದ ದೂರ ಉಳಿಯುತ್ತಾರೆ. ಆದರೆ 1994 ರಲ್ಲಿ ಜನತಾದಳದಿಂದ ಗೆದ್ದು ಹೆಚ್.ಡಿ ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗುತ್ತಾರೆ. ದೇವೇಗೌಡರು ಪ್ರಧಾನಿಯಾದ ನಂತರ ಜೆ. ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗ ಪಟೇಲ್ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾದರು. 1999 ರಲ್ಲಿ ಎರಡನೇ ಬಾರಿಗೆ ಸೋತು ಅಧಿಕಾರದಿಂದ ಮತ್ತೆ ದೂರ ಉಳಿದರು.

2004ರಲ್ಲಿ ಜೆಡಿಎಸ್​ನಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆದರೆ ಬದಲಾದ ರಾಜಕೀಯ ವಿದ್ಯಮಾನಗಳಿಂದಾಗಿ 2006 ರಲ್ಲಿ ಡಿಸಿಎಂ ಸ್ಥಾನ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ನಿಂತು ಗೆದ್ದರು.

ಸಿದ್ದರಾಮಯ್ಯ ಸಿದ್ದರಾಮಯ್ಯ
ಸಿದ್ದರಾಮಯ್ಯ

ನಾಲ್ಕು ಬಾರಿಯೂ ಸಾಂವಿಧಾನಿಕ ಹುದ್ದೆ: 2008 ರಲ್ಲಿ ಕಾಂಗ್ರೆಸ್​ನಿಂದ ವರುಣಾ ಕ್ಷೇತ್ರದಲ್ಲಿ ನಿಂತು ಗೆದ್ದರು. 2009 ರಲ್ಲಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಅಲ್ಲಿಂದ ಇಲ್ಲಿಯವರೆಗೂ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಸತತವಾಗಿ ನಾಲ್ಕನೇ ಬಾರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿಯೂ ಸಾಂವಿಧಾನಿಕ ಹುದ್ದೆಯಲ್ಲಿಯೇ ಇದ್ದಾರೆ.

2009ರಲ್ಲಿ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದರೆ, 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿ ರಾಜ್ಯಭಾರ ಮಾಡಿದರು. 2018ರಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾದರೂ ಮೈತ್ರಿ ಸರ್ಕಾರ ಇದ್ದ ಕಾರಣಕ್ಕೆ ಒಂದು ವರ್ಷ ಅವರಿಗೆ ಅಧಿಕಾರ ಸಿಗಲಿಲ್ಲ. ಆದರೆ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಜಯ : ಅದಕ್ಕೆ ಸಾಂವಿಧಾನಿಕ ಮಾನ್ಯತೆ ಇಲ್ಲದಿದ್ದರೂ 2019ರಲ್ಲಿ ಮೈತ್ರಿ ಸರ್ಕಾರ ಪತನವಾದ ನಂತರ ಕಾಂಗ್ರೆಸ್​ನ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ನಾಲ್ಕು ವರ್ಷ ಸಾಂವಿಧಾನಿಕ ಹುದ್ದೆಯಲ್ಲಿ ಮುಂದುವರೆದರು. ಇದೀಗ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಜಯಗಳಿಸಿದ್ದು, ಮತ್ತೊಮ್ಮೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುತ್ತಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಒಟ್ಟಿನಲ್ಲಿ ನಾಲ್ಕು ದಶಕದ ರಾಜಕಾರಣದಲ್ಲಿ ಕೇವಲ ಎರಡು ಬಾರಿ ಮಾತ್ರ ಅಧಿಕಾರದಿಂದ ದೂರ ಉಳಿದಿದ್ದು ಬಿಟ್ಟರೆ ಯಾವುದೇ ಸರ್ಕಾರ ಇದ್ದರೂ 30 ವರ್ಷಗಳ ಕಾಲ ಸಾಂವಿಧಾನಿಕ ಹುದ್ದೆಗಳಲ್ಲಿಯೇ ಅಧಿಕಾರ ಅನುಭವಿಸಿಕೊಂಡು ಬಂದಿರುವ ಅಪರೂಪದ ರಾಜಕಾರಣಿ ಸಿದ್ದರಾಮಯ್ಯ ಎನ್ನಬಹುದಾಗಿದೆ. ಜನತಾದಳದಿಂದ ಎರಡು ಬಾರಿ ಡಿಸಿಎಂ ಆದರೆ ಕಾಂಗ್ರೆಸ್ ನಿಂದ ಎರಡು ಬಾರಿ ಮುಖ್ಯಮಂತ್ರಿಯಾಗುತ್ತಿದ್ದಾರೆ. ಬಹುಶಃ ಮೂಲ ಕಾಂಗ್ರೆಸ್ಸಿಗರಿಗೂ ಕಾಂಗ್ರೆಸ್ ನಲ್ಲಿ ಇಷ್ಟು ಅವಕಾಶ ಸಿಗುವುದು ಅನುಮಾನ ಎನ್ನಬಹುದಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ: ದೆಹಲಿಯಲ್ಲಿ ಕಾಂಗ್ರೆಸ್‌ ವರಿಷ್ಠರಿಂದ ಘೋಷಣೆ

Last Updated : May 18, 2023, 3:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.