ETV Bharat / state

ಜಾತಿ ಜನಗಣತಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳುವ ಭರವಸೆ ಇದೆ: ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಸುಪ್ರೀಂಕೋರ್ಟ್‌ನ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. ದೇಶದಲ್ಲಿಯೇ ಮೊದಲ ಬಾರಿ ಮನೆಮನೆಗೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Feb 13, 2022, 12:22 PM IST

ಬೆಂಗಳೂರು: ಸುಪ್ರೀಂಕೋರ್ಟ್​ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸುಪ್ರೀಂಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲ ಬಾರಿ ಮನೆಮನೆಗೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದಿದ್ದಾರೆ.

ಇದನ್ನೂ ಓದಿ: ವರ್ಷದ ಮೊದಲ ಉಡ್ಡಯನಕ್ಕೆ ಇಸ್ರೋ ಸಿದ್ಧತೆ: ನಾಳೆ 3 ಉಪಗ್ರಹ ಹೊತ್ತು ನಭಕ್ಕೆ ಜಿಗಿಯಲಿದೆ PSLV-C 52

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡ ಸಂಗ್ರಹಿಸಿದೆ. ರಾಜ್ಯ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು. ರಾಜ್ಯದ ಬಿಜೆಪಿ ಸರ್ಕಾರ ಕಾಲ ವ್ಯಯ ಮಾಡದೇ, ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆ ಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು. 2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್​ ರಚಿಸಿ ಈಗಿನ ಬಿಕ್ಕಟ್ಟಿನ ಪರಿಹಾರಕ್ಕೆ ಪ್ರಯತ್ನಿಸಬೇಕು.

ಇದನ್ನೂ ಓದಿ: ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸುವವರ ಮೇಲೆ ಕಾನೂನು ಕ್ರಮ: ಬೊಮ್ಮಾಯಿ

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಕರ್ನಾಟಕದಲ್ಲಿ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಇದಕ್ಕೆ ಸರಿಯಾದ ಉತ್ತರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿರುವುದರಿಂದ ಸುಪ್ರೀಂ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು ಎಂದರು.

ಸುಪ್ರೀಂ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಪ್ರತಿಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಸೇರಲು ಹೊರಟ ಸಿಎಂ ಇಬ್ರಾಹಿಂಗೆ ಮಾನ್ಯತೆ ಸಿಗುವುದೇ ಅನುಮಾನ

ಜಿಲ್ಲಾ ಪಂಚಾಯತ್, ತಾಲೂಕ್​ ಪಂಚಾಯತ್​ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಲು ಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ, ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.