ETV Bharat / state

ಜಿಎಸ್​ಟಿ ಪಾಲಿನಲ್ಲಿ ಕಡಿತ; ರಾಜ್ಯಕ್ಕೆ ದೊಡ್ಡ ಅನ್ಯಾಯ ಎಂದ ಸಿದ್ದರಾಮಯ್ಯ

author img

By

Published : Aug 28, 2020, 11:01 PM IST

ಕೇಂದ್ರ ಸರ್ಕಾರವು ಪರಿಹಾರ ನೀಡುವುದರಿಂದ ತಪ್ಪಿಸಿಕೊಂಡು, ರಾಜ್ಯಗಳು ಆರ್​ಬಿಐನಿಂದ ಸಾಲ ಪಡೆದು ಪರಿಸ್ಥಿತಿಯನ್ನು ನಿಭಾಯಿಸುವಂತೆ ಹೇಳುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಅತ್ಯಂತ ದೊಡ್ಡ ದ್ರೋಹವೆಂದು ಪರಿಗಣಿಸಬೇಕಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

Siddaramaiah
Siddaramaiah

ಬೆಂಗಳೂರು: ಜಿ.ಎಸ್.ಟಿ ಕೌನ್ಸಿಲ್ ಸಭೆಯು ಆ.27 ರಂದು ನಡೆದಿದೆ. ಆದ್ರೆ ಇಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ಸಿಗುವ ಅವಕಾಶ ಇಲ್ಲವಾಗಿರುವುದು ಬೇಸರದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಈ ನಿಲುವು ಸಂವಿಧಾನ ಬಾಹಿರ. ಸೆಕ್ಷನ್ 18ರ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಜಿಎಸ್​ಟಿ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಇದನ್ನು ಪಡೆದುಕೊಳ್ಳುವುದು ರಾಜ್ಯಗಳ ಸಂವಿಧಾನಾತ್ಮಕ ಅಧಿಕಾರವಾಗಿದೆ ಎಂದರು.

ಆದರೆ ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸುತ್ತಿದೆ. ಕೇಂದ್ರ ಸರ್ಕಾರವು ಪರಿಹಾರ ನೀಡುವುದರಿಂದ ತಪ್ಪಿಸಿಕೊಂಡು, ರಾಜ್ಯಗಳು ಆರ್​ಬಿಐನಿಂದ ಸಾಲ ಪಡೆದು ಪರಿಸ್ಥಿತಿಯನ್ನು ನಿಭಾಯಿಸುವಂತೆ ಹೇಳುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಅತ್ಯಂತ ದೊಡ್ಡ ದ್ರೋಹವೆಂದು ಪರಿಗಣಿಸಬೇಕಾಗಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ರಾಜ್ಯಗಳಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರದ ಬದಲಾಗಿ ಸಾಲದ ರೂಪದಲ್ಲಿ ಹಣ ಪಡೆದರೆ ಅದನ್ನು ಬಡ್ಡಿ ಸಮೇತ ತೀರಿಸುವ ಜವಾಬ್ದಾರಿ ರಾಜ್ಯಗಳದ್ದಾಗಿರುತ್ತದೆ. ಇದರಿಂದಾಗಿ ರಾಜ್ಯಗಳ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದಿದ್ದಾರೆ.

ಈ ಸಭೆಯಲ್ಲಿ ಕೇಂದ್ರ ಸರ್ಕಾರವು, ಕೋವಿಡ್-19 ನಿಂದಾಗಿ ಜಿಎಸ್​ಟಿ ಸಂಗ್ರಹದಲ್ಲಿ ರೂ.3 ಲಕ್ಷ ಕೋಟಿಗಳಷ್ಟು ಕೊರತೆಯಾಗಲಿದೆ ಹಾಗೂ ಜಿಎಸ್​​ಟಿ ವ್ಯವಸ್ಥೆಯಿಂದ ಆಗಿರುವ ಆದಾಯ ಕೊರತೆ ರೂ.97,000 ಗಳಷ್ಟಾಗಲಿದೆ. ಇದರಲ್ಲಿ 2.35 ಲಕ್ಷ ಕೋಟಿ ರೂಪಾಯಿಗಳ ಜಿಎಸ್​​ಟಿ ಪರಿಹಾರವನ್ನು ಈ ವರ್ಷ ನೀಡಲಾಗುವುದಿಲ್ಲವೆಂದು ತಿಳಿಸಿ, ಆರ್​ಬಿಐನಿಂದ ಸಾಲ ಪಡೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಕರ್ನಾಟಕವು ಕೊರೊನಾ ಸಂಕಷ್ಟದ ನಡುವೆಯೂ ಶೇ.71.61 ರಷ್ಟು ಜಿಎಸ್​​ಟಿ ಸಂಗ್ರಹ ಮಾಡಿದೆ. ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಾದ ರೂ.13,764 ಕೋಟಿಗಳನ್ನು ಬಾಕಿ ಉಳಿಸಿಕೊಂಡಿದೆ. ಜನವರಿಯವರೆಗೆ ಇದು ರೂ. 27,000 ಕೋಟಿಗಳಿಗೆ ಏರಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಕೇಂದ್ರವು 15ನೇ ಹಣಕಾಸು ಆಯೋಗದ ವರದಿಯಲ್ಲೂ ರಾಜ್ಯಕ್ಕೆ ತಾರತಮ್ಯ ಮಾಡಿದೆ. ಇದೀಗ ಜಿಎಸ್​​ಟಿಯಲ್ಲೂ ದ್ರೋಹ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರವೇ ರಾಜ್ಯಕ್ಕೆ ಪರಿಹಾರ ನೀಡಬೇಕು:
ಜಿಎಸ್​​ಟಿ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರವೇ ಸಾಲ ಪಡೆದು ರಾಜ್ಯಗಳಿಗೆ ಪರಿಹಾರವನ್ನು ನೀಡಬೇಕು. ಸಾಲಕ್ಕೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ರಾಜ್ಯಗಳ ಮೇಲೆ ಹಾಕಬಾರದು. ಈಗಾಗಲೇ ಕೇಂದ್ರ ಸರ್ಕಾರವು ತನ್ನ ದುಷ್ಟ ಆರ್ಥಿಕ ನೀತಿಗಳಿಂದಾಗಿ ರಾಜ್ಯಗಳ ತೆರಿಗೆಯ ಅಧಿಕಾರವನ್ನು ನಿಧಾನವಾಗಿ ಕಿತ್ತುಕೊಳ್ಳುತ್ತಿದೆ. ಎಪಿಎಂಸಿ ಕಾಯ್ದೆಯ ತಿದ್ದುಪಡಿ ಇದಕ್ಕೆ ಅತ್ಯುತ್ತಮ ನಿದರ್ಶನ. ರಾಜ್ಯಗಳ ಆರ್ಥಿಕ ಚೈತನ್ಯವನ್ನು ಸಂಪೂರ್ಣ ನಾಶ ಮಾಡಿ ‘ಬನಾನ ರಿಪಬ್ಲಿಕ್’ ರೀತಿಯ ಆಡಳಿತ ವ್ಯವಸ್ಥೆಗೆ ದೇಶವನ್ನು ದೂಡಲು ಯತ್ನಿಸುತ್ತಿದೆ. ಕೇಂದ್ರ-ರಾಜ್ಯಗಳ ನಡುವೆ ಸಹಕಾರ ತತ್ವದ ಪ್ರಜಾಪ್ರಭುತ್ವ ಮಾದರಿಯ ವ್ಯವಸ್ಥೆ ಇರಬೇಕಾದ ಬದಲಿಗೆ ಸರ್ವಾಧಿಕಾರಿ ಪ್ರವೃತ್ತಿಯ ಕಡೆಗೆ ದೇಶವನ್ನು ದೂಡಲಾಗುತ್ತಿದೆ ಎಂದು ಹೇಳಿದ್ದಾರೆ.

ಒಂದೇ ಪಕ್ಷದ ಅಧಿಕಾರ:
ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಒಂದೇ ಪಕ್ಷದ ಆಡಳಿತವಿದ್ದರೆ ಸ್ವರ್ಗವನ್ನು ಸೃಷ್ಟಿಸಿ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ್ದ ಬಿ.ಜೆ.ಪಿ. ಸರ್ಕಾರಗಳು ರಾಜ್ಯದ ಜನರನ್ನು ಇನ್ನಿಲ್ಲದಂತೆ ಶೋಷಿಸುತ್ತಿವೆ. ಪೆಟ್ರೋಲ್, ಡೀಸೆಲ್ ದರ 100 ರೂ. ಗಳ ಹತ್ತಿರಕ್ಕೆ ತಲುಪುತ್ತಿದೆ. ಪೆಟ್ರೋಲ್, ಡೀಸೆಲ್‍ಗಳ ಮೇಲೆ ಕೇಂದ್ರವು ಅಮಾನವೀಯ ರೀತಿಯಲ್ಲಿ ತೆರಿಗೆ ಹಾಕುತ್ತಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 40 ರಿಂದ 45 ಡಾಲರ್ ಗಳಿಗೆ ಒಂದು ಬ್ಯಾರಲ್ ಕಚ್ಚಾ ತೈಲ ದೊರೆಯುತ್ತಿದೆ. ಸಂಸ್ಕರಣೆ, ಸಾಗಾಟ ಇತ್ಯಾದಿಗಳೆಲ್ಲವು ಸೇರಿದರೂ 30 ರೂ. ಗಳಿಗೆ ಒಂದು ಲೀಟರ್ ಪೆಟ್ರೋಲ್ ಅನ್ನು ಮಾರಬೇಕು. ಆದರೆ ಕೇಂದ್ರ ಸರ್ಕಾರವು ಜನರನ್ನು ಶತ್ರುಗಳೆಂದು ಭಾವಿಸಿ ತೆರಿಗೆ ಹಾಕುತ್ತಿದೆ. ಸಾಧ್ಯವಿರುವ ರೀತಿಯಲ್ಲೆಲ್ಲಾ ಜನರನ್ನು ಶೋಷಿಸುತ್ತಿರುವ ಅತ್ಯಂತ ಅಮಾನವೀಯ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಆರ್​ಬಿಐನಿಂದ ಸಾಲ ಪಡೆಯುವ ಆಯ್ಕೆಯನ್ನು ಮಾಡಿಕೊಳ್ಳಬಾರದು. ಹೀಗೆ ಮಾಡಿದರೆ ರಾಜ್ಯದ ಸಂವಿಧಾನಾತ್ಮಕ ಅಧಿಕಾರಗಳನ್ನು ಕೇಂದ್ರದ ಕಾಲಿನ ಕೆಳಗೆ ದೂಡಿದಂತಾಗುತ್ತದೆ. ಇದರಿಂದ ರಾಜ್ಯವು ಇನ್ನಷ್ಟು ಗುಲಾಮಗಿರಿಯ ಕಡೆಗೆ ಸಾಗುತ್ತದೆ. ರಾಜ್ಯದ ಪಾಲಿಗೆ ಬರಬೇಕಾದ ಜಿಎಸ್​​ಟಿ ಪಾಲನ್ನು ನಿರ್ದಾಕ್ಷಣ್ಯವಾಗಿ ಕೇಂದ್ರದಿಂದ ಪಡೆದುಕೊಳ್ಳಬೇಕು. ಈ ಮೂಲಕ ರಾಜ್ಯದ ಹಕ್ಕನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.