ETV Bharat / state

ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ: ಸಿದ್ದರಾಮಯ್ಯ - covid compensation money

ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆ ಕೋವಿಡ್‌ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ 5 ಲಕ್ಷ ರೂ. ಕಡ್ಡಾಯವಾಗಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Sep 30, 2021, 7:06 AM IST

ಬೆಂಗಳೂರು : ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ, ಕೋವಿಡ್‌ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ 5 ಲಕ್ಷ ರೂಪಾಯಿಗಳನ್ನು ಕಡ್ಡಾಯವಾಗಿ ನೀಡಬೇಕೆಂದು ವಿಧಾನಸಭೆ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಿದ್ದಾರೆ.

ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಕೊಡಬೇಕು:

ರಾಜ್ಯದಲ್ಲಿ ಕೋವಿಡ್-19ನ ಎರಡು ಅಲೆಗಳಿಂದ ಕನಿಷ್ಟ 4 ಲಕ್ಷ ಜನ ಮರಣ ಹೊಂದಿದ್ದಾರೆ. ಹಾಗಾಗಿ ಕುಟುಂಬಗಳಲ್ಲಿ ದುಡಿಯುವ ಸದಸ್ಯರುಗಳನ್ನು ಕಳೆದುಕೊಂಡು ಈ ಕುಟುಂಬಗಳು ಅನಾಥವಾಗಿವೆ. ಅಸಂಖ್ಯಾತ ಕುಟುಂಬಗಳಲ್ಲಿ ತಂದೆ - ತಾಯಿ ಇಬ್ಬರನ್ನು ಕಳೆದುಕೊಂಡ ಮಕ್ಕಳು ದಿಕ್ಕು ತೋಚದೆ ಕೂತಿದ್ದಾರೆ.

ದುಡಿವ ಮಕ್ಕಳನ್ನು ಕಳೆದುಕೊಂಡ ವೃದ್ಧ ತಂದೆ, ತಾಯಿಗಳು ತಬ್ಬಲಿಗಳಾಗಿದ್ದಾರೆ. ಹಾಗಾಗಿ ಅಸಹಾಯಕರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ. ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಬೇಕು ಎಂದು ಒತ್ತಾಯಿಸಿದ್ದೆವು ಎಂದಿದ್ದಾರೆ.

ಕೇಂದ್ರ ಸರ್ಕಾರ 2020 ರ ಮಾ.14ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂ. ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ದಿನ ಮಾರ್ಪಡಿಸಿಕೊಂಡಿದೆ.

ಜನರಿಗೆ ದ್ರೋಹವೆಸಗುತ್ತಿರುವ ಸರ್ಕಾರ:

ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ. [ಕೇಂದ್ರ 4 ಲಕ್ಷ, ರಾಜ್ಯ ಸರ್ಕಾರ-1ಲಕ್ಷ]. ಹಾಗಾಗಿ ಕೋವಿಡ್-19 ನಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಕೊಡಲೇಬೇಕೆಂದು ಒತ್ತಾಯಿಸಿದ್ದೆವು.

ಆದರೆ, ಸೆ.28ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡ್​ ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ರೂಪಾಯಿಗಳನ್ನು, ಕೇಂದ್ರ ಸರ್ಕಾರದಿಂದ 50 ಸಾವಿರ ರೂಪಾಯಿಗಳನ್ನು [ಬಿಪಿಎಲ್ ಅಲ್ಲದ ಕುಟುಂಬಗಳೂ ಸೇರಿದಂತೆ ಯಾರೆ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟರೆ] ನೀಡುವುದಾಗಿ ಆದೇಶ ಹೊರಡಿಸಲಾಗಿದೆ.

ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹ ಎಸಗಲಾಗುತ್ತಿದೆ ಎಂದಿದ್ದಾರೆ.

ಕೋವಿಡ್ ಬಿಕ್ಕಟ್ಟು ತುತ್ತ ತುದಿಯಲ್ಲಿದ್ದಾಗ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೇ ಜನರು ಬೀದಿಗಳಲ್ಲಿ ಮರಣ ಹೊಂದುವಂತಹ ಅರಾಜಕತೆ ಸೃಷ್ಟಿಸಲಾಯಿತು. ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಈ ನಿಲುವು ಮಾನವೀಯ ಎನ್ನಿಸುವುದಿಲ್ಲ ರಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ:

ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ. ಹಾಗಾಗಿ, ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಬೇಕು. ಪ್ರಕೃತಿ ವಿಕೋಪ ನಿಯಮಗಳಲ್ಲಿ, ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದಿದೆ.

ರಾಜ್ಯ ಸರ್ಕಾರ ಅದನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡ್​ ಇದ್ದವರಿಗೆ ಮಾತ್ರ ಕೇವಲ 1.5 ಲಕ್ಷ [ಕೇಂದ್ರ, ರಾಜ್ಯಗಳೆರಡೂ ಸೇರಿ] ರೂಪಾಯಿಗಳನ್ನು ನೀಡಲಾಗುವುದೆಂದು ಹೇಳಲಾಗಿದೆ.

ಇದು ಸರಿಯಲ್ಲ, ರಾಜ್ಯ ಸರ್ಕಾರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರ ಕೇಂದ್ರವನ್ನು ಆಗ್ರಹಿಸಬೇಕು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.