ಬೆಂಗಳೂರು: ಸಿದ್ದರಾಮಯ್ಯನವರನ್ನೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಇಂದು (ಗುರುವಾರ) ಘೋಷಿಸಿದೆ. ಈ ಮೂಲಕ ಕಳೆದ 5 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟಕ್ಕೆ ಅಧಿಕೃತ ತೆರೆ ಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶ ಕಂಡಿದೆ.
ಕೆಲವು ಷರತ್ತುಗಳ ಸೂತ್ರದಡಿ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಪಕ್ಷದ ಘಟಾನುಘಟಿ ನಾಯಕರ ಆಂತರಿಕ ಬೇಗುದಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
-
#WATCH | Siddaramaiah will be the Chief Minister of Karnataka and DK Shivakumar will be the only deputy CM, announces KC Venugopal, Congress General Secretary -Organisation. pic.twitter.com/q7PinKYWpG
— ANI (@ANI) May 18, 2023 " class="align-text-top noRightClick twitterSection" data="
">#WATCH | Siddaramaiah will be the Chief Minister of Karnataka and DK Shivakumar will be the only deputy CM, announces KC Venugopal, Congress General Secretary -Organisation. pic.twitter.com/q7PinKYWpG
— ANI (@ANI) May 18, 2023#WATCH | Siddaramaiah will be the Chief Minister of Karnataka and DK Shivakumar will be the only deputy CM, announces KC Venugopal, Congress General Secretary -Organisation. pic.twitter.com/q7PinKYWpG
— ANI (@ANI) May 18, 2023
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರಿಕೆ: ನವದೆಹಲಿಯಲ್ಲಿಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿ.ಕೆ.ಶಿವಕುಮಾರ್ ಸಂಸತ್ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮೇ 20ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನಮನಸ್ಕ ಪಕ್ಷಗಳ ಜನರನ್ನು ಆಹ್ವಾನಿಸಲಾಗುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
-
We will invite people from like-minded parties to take part in the swearing-in ceremony in Karnataka: KC Venugopal, General Secretary-Organisation, Congress pic.twitter.com/x1CGciBIdX
— ANI (@ANI) May 18, 2023 " class="align-text-top noRightClick twitterSection" data="
">We will invite people from like-minded parties to take part in the swearing-in ceremony in Karnataka: KC Venugopal, General Secretary-Organisation, Congress pic.twitter.com/x1CGciBIdX
— ANI (@ANI) May 18, 2023We will invite people from like-minded parties to take part in the swearing-in ceremony in Karnataka: KC Venugopal, General Secretary-Organisation, Congress pic.twitter.com/x1CGciBIdX
— ANI (@ANI) May 18, 2023
ಭಾರತ್ ಜೋಡೋ ಪಾದಯಾತ್ರೆ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದು ಕೊಟ್ಟಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ವಿಶೇಷ ಧನ್ಯವಾದಗಳು. ಪ್ರಮುಖವಾಗಿ ರಾಜ್ಯದಲ್ಲಿ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ ಶ್ರೇಯಸ್ಸು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ಸಿದ್ದರಾಮಯ್ಯ ಮಾಸ್ ಲೀಡರ್ ಆದರೆ, ಡಿ.ಕೆ.ಶಿವಕುಮಾರ್ ಡೈನಾಮಿಕ್ ಲೀಡರ್. ಮುಖ್ಯಮಂತ್ರಿ ಹುದ್ದೆಗೆ ಇಬ್ಬರೂ ಸಮಾನರು. ಹಾಗಾಗಿ ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ಐದು ದಿನಗಳಿಂದ ನಡೆದುಬಂದ ರಾಜಕೀಯ ವಿದ್ಯಮಾನಗಳನ್ನು ವಿವರಿಸಿದರು.
ರಾಜ್ಯದ ಮುಖ್ಯಮಂತ್ರಿ ವಿಚಾರವಾಗಿ ಕಳೆದ ಐದು ದಿನಗಳಿಂದ ಈ ಬಗ್ಗೆ ಚರ್ಚೆ ಮಾಡುತ್ತಾ ಬರಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆ ಮಾತುಕತೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
-
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
— Siddaramaiah (@siddaramaiah) May 18, 2023 " class="align-text-top noRightClick twitterSection" data="
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
">ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
— Siddaramaiah (@siddaramaiah) May 18, 2023
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
— Siddaramaiah (@siddaramaiah) May 18, 2023
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
"ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ" ಎಂದು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
Karnataka Deputy CM designate DK Shivakumar
— ANI (@ANI) May 18, 2023 " class="align-text-top noRightClick twitterSection" data="
tweets, "Karnataka's secure future and our people's welfare is our top priority, and we are united in guaranteeing that." pic.twitter.com/WK6HeImoxV
">Karnataka Deputy CM designate DK Shivakumar
— ANI (@ANI) May 18, 2023
tweets, "Karnataka's secure future and our people's welfare is our top priority, and we are united in guaranteeing that." pic.twitter.com/WK6HeImoxVKarnataka Deputy CM designate DK Shivakumar
— ANI (@ANI) May 18, 2023
tweets, "Karnataka's secure future and our people's welfare is our top priority, and we are united in guaranteeing that." pic.twitter.com/WK6HeImoxV
ಹೈಕಮಾಂಡ್ ತನ್ನ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಕೂಡ ಟ್ವೀಟ್ಮಾಡಿಕೊಂಡಿದ್ದಾರೆ. "ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ಜನಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ" ಎಂದು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಅವರು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್ ಮಾಡಿದ್ದಾರೆ. "ಕರ್ನಾಟಕದ ಜನತೆಯ ಅಭಿವೃದ್ಧಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧವಾಗಿದೆ. ರಾಜ್ಯದ 6.5 ಕೋಟಿ ಕನ್ನಡಿಗರಿಗೆ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ" ಎಂದು ಅವರು ಕೂಡ ಟ್ವೀಟ್ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವ ಮೂಲಕ ಜಯಭೇರಿ ಬಾರಿಸಿತ್ತು. ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದ್ದಂತೆ ಪಕ್ಷದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಯಾರು? ಎಂಬ ಚರ್ಚೆ ಆರಂಭವಾಗಿತ್ತು. ಒಂದು ಬಣ ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಿದ್ದರೆ, ಮತ್ತೊಂದು ಬಣ ಡಿ.ಕೆ.ಶಿವಕುಮಾರ್ ಪರ ಲಾಬಿ ಮಾಡಿತ್ತು. ಇದೀಗ ಹೊಸ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಹೈಕಮಾಂಡ್ ಯಶಸ್ಸು ಸಾಧಿಸಿದ್ದು ಉದ್ಭವಿಸಿದ್ದ ಒಳಜಗಳಕ್ಕೆ ವಿರಾಮ ನೀಡಿದೆ.
ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ?: ಡಾ.ಕೆ.ಸುಧಾಕರ್