ETV Bharat / state

ನಮ್ಮ ರಾಜಕಾರಣಿಗಳು ಯುಪಿ ಸಿಎಂರಿಂದ ಪ್ರೇರಿತರಾಗಿರೋದು ದುರದೃಷ್ಟಕರ: ಸಿದ್ದರಾಮಯ್ಯ

ನಮ್ಮ ರಾಜಕಾರಣಿಗಳು ಉತ್ತರಪ್ರದೇಶದ ಮುಖ್ಯಮಂತ್ರಿ ಅವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Siddaramaiah
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Nov 7, 2020, 9:27 AM IST

Updated : Nov 7, 2020, 10:02 AM IST

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಕರ್ನಾಟಕಕ್ಕೆ, ಉತ್ತರಪ್ರದೇಶ ರಾಜ್ಯ ಎಂದಿಗೂ ಮಾದರಿಯಾಗಲು ಸಾಧ್ಯವಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Siddaramaiah tweet
ಸಿದ್ದರಾಮಯ್ಯ ಟ್ವೀಟ್​​

ಈ ಕುರಿತು ಸರಣಿ ಟ್ವೀಟ್​​ ಮಾಡಿರುವ ಸಿದ್ದರಾಮಯ್ಯ, 'ಲವ್ ಜಿಹಾದ್' ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಘೋಷಣೆ, ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನು ಅಲ್ಲ. ಕೋಮುದ್ವೇಷ ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದಾರೆ.

Siddaramaiah tweet
ಸಿದ್ದರಾಮಯ್ಯ ಟ್ವೀಟ್​​

'ಲವ್ ಜಿಹಾದ್' ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೇ ಇರುವಾಗ, 'ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ' ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?

Siddaramaiah tweet
ಸಿದ್ದರಾಮಯ್ಯ ಟ್ವೀಟ್​​

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ರಾಜ್ಯ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಮತಾಂತರ ಎನ್ನುವುದು ಅಂತರ್​​ಧರ್ಮೀಯ ಮದುವೆಗೆ ಅಸ್ತ್ರವಾಗಬಾರದು' ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

Siddaramaiah tweet
ಸಿದ್ದರಾಮಯ್ಯ ಟ್ವೀಟ್​​

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಸಲಹೆ ನೀಡಿದ್ದಾರೆ.

Last Updated : Nov 7, 2020, 10:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.