ETV Bharat / state

ಮೀಸಲಾತಿಗಾಗಿ ಬಿಜೆಪಿ ಹೋರಾಟ ಸಾಮಾಜಿಕ ನ್ಯಾಯದ ದಿಕ್ಕು ತಪ್ಪಿಸುವ ರಾಜಕೀಯ ಷಡ್ಯಂತ್ರ: ಸಿದ್ದರಾಮಯ್ಯ - bangalore latest news

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯ ಎಂಬ ವಿಚಾರದ ಅಡಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Feb 14, 2021, 5:19 PM IST

ಬೆಂಗಳೂರು: ಬಿಜೆಪಿ ನಾಯಕರು ಏಕಾಏಕಿ ಮೀಸಲಾತಿಗಾಗಿ ಹೋರಾಟ ಆರಂಭಿಸಿದ್ದು ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕು ತಪ್ಪಿಸುವ ಯತ್ನ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಸಾಮಾಜಿಕ ನ್ಯಾಯ ಎಂಬ ವಿಚಾರದ ಅಡಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ರಾಜ್ಯ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕು ತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ಕೇಳಿದ್ದಾರೆ.

  • ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ @BJP4Karnataka ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? 1/7#ಸಾಮಾಜಿಕನ್ಯಾಯ

    — Siddaramaiah (@siddaramaiah) February 14, 2021 " class="align-text-top noRightClick twitterSection" data=" ">

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ ರಾಜ್ಯ ಬಿಜೆಪಿ ನಾಯಕರೇ ಎಂದು ಕೇಳಿದ್ದಾರೆ.

ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ? ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು ಎಂದಿದ್ದಾರೆ.

ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸ ಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಸರ್ಕಾರದ ಕೈಯಲ್ಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ‌: ರಮೇಶ ಜಾರಕಿಹೊಳಿ‌

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.