ETV Bharat / state

ಕರ್ತವ್ಯಪಾಲನೆ ಪ್ರವಚನ ನೀಡಿದ ಪ್ರಧಾನಿಯಿಂದ ವೈಫಲ್ಯ ಮುಚ್ಚಿಕೊಳ್ಳುವ ಯತ್ನ: ಸಿದ್ದು ಆರೋಪ

author img

By

Published : Oct 20, 2020, 10:00 PM IST

ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

siddaramaiah
siddaramaiah

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ, ಕೊರೊನಾ ವೈರಸ್​ ತಡೆಗಟ್ಟಲು ಮಾರ್ಗಸೂಚಿ ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಣಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ಸರ್ಕಾರ, ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

  • ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು. 5/7

    — Siddaramaiah (@siddaramaiah) October 20, 2020 " class="align-text-top noRightClick twitterSection" data=" ">

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

  • ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ? 4/7#modifailsindia

ಯಾಮಾರಿದ್ರೆ ಜೀವಕ್ಕೆ ಆಪತ್ತು, ನಿಮ್ಮ ಸುರಕ್ಷತೆ ಮುಖ್ಯ ಎಂದ ನಮೋ!

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದಿದ್ದಾರೆ.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿ ಅವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷ್ಯಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆ ನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೇ ಇನ್ನೇನು ಆಗಲು ಸಾಧ್ಯ? ಎಂದು ಪ್ರಶ್ನೆ ಮಾಡಿದ್ದಾರೆ.

  • ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು @narendramodi ಅವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು. 2/7#modifailsindia

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದಿದ್ದಾರೆ.

  • ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ @narendramodi ಅವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. 1/7#modifailsindia

ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ - ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು ಎಂದಿದ್ದಾರೆ.

  • ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ @BJP4Karnataka ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ @narendramodi ಅವರ ಗಮನಕ್ಕೆ ಬಂದಿದೆಯೇ? 7/7#modifailsindia

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ಟ್ವೀಟ್​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.