ETV Bharat / state

ಎಸ್​ಸಿ ಎಸ್​ಟಿ ಮೀಸಲು ಹೆಚ್ಚಳ ಅನುಷ್ಠಾನ ಪ್ರಕ್ರಿಯೆ ಬಗ್ಗೆ ಸರ್ಕಾರದ ಮೌನ ಸರಿಯಲ್ಲ: ಸಿದ್ದರಾಮಯ್ಯ - increase sc st reservation

ಸುಪ್ರೀಂಕೋರ್ಟ್​ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ ಎಂದಾದ ಮೇಲೆ ಹೇಗೆ ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಿಸಲು ಸಾಧ್ಯ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸ ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

KN_BNG_
ಸಿದ್ದರಾಮಯ್ಯ
author img

By

Published : Oct 10, 2022, 9:42 PM IST

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೇ ಮೌನವಾಗಿದ್ದುಕೊಂಡು ಎಸ್​ಸಿ ಎಸ್​ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್​ ದಾಸ್ ಸಮಿತಿ ನೇಮಿಸಿತ್ತು. ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಎಸ್​ಸಿ ಎಸ್​ಟಿ ಮೀಸಲಾತಿಯನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ ಎಂದಿದ್ದಾರೆ.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್​ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು.

ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ. ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೇ ಎಸ್ ಸಿ/ಎಸ್ ಟಿ ಮೀಸಲಾತಿ ಒಟ್ಟು ಶೇ. ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಎಂಟಿಬಿ ನಾಗರಾಜ್ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ: ಸಚಿವ ಮುನಿರತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.