ETV Bharat / state

ಜನರ ಕೈಗೆ ಪಾಲಿಸ್ಟರ್ ಧ್ವಜ, ಅಂಬಾನಿ-ಅದಾನಿ ಕೈಗೆ ಚಿನ್ನದ ಖಜಾನೆ: ಸಿದ್ದರಾಮಯ್ಯ - ಅಂಬಾನಿ

ವಿದ್ಯುತ್ ಕ್ಷೇತ್ರವು ನಮ್ಮ ಸಂವಿಧಾನದ 7ನೇ ಶೆಡ್ಯೂಲ್‍ನಲ್ಲಿ ಸಮವರ್ತಿ ಪಟ್ಟಿಯಲ್ಲಿರುವ ಕಾರಣದಿಂದ ಇದರಲ್ಲಿ ಯಾವುದೇ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕಡ್ಡಾಯ ಕುರಿತು ಶಾಸನಸಭೆಗಳಲ್ಲಿ ಚರ್ಚೆ ನಡೆಯಬೇಕು. ಆದರೆ, ಕೇಂದ್ರ ಸರ್ಕಾರ ಒಕ್ಕೂಟ ತತ್ವಕ್ಕೆ ವಿರುದ್ಧವಾಗಿ ಈ ನಿಯಮ ತಂದಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೋದಿಯಿಂದ ಅಂಬಾನಿ ಅದಾನಿ ಕೈಗೆ ಚಿನ್ನದ ಖಜಾನೆ
ಮೋದಿಯಿಂದ ಅಂಬಾನಿ ಅದಾನಿ ಕೈಗೆ ಚಿನ್ನದ ಖಜಾನೆ
author img

By

Published : Aug 10, 2022, 10:45 PM IST

ಬೆಂಗಳೂರು: ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿಯೂ ಆದ ವಿದ್ಯುಚ್ಛಕ್ತಿ [ತಿದ್ದುಪಡಿ] ಕಾಯ್ದೆ-2022 ಯನ್ನು ಲೋಕಸಭೆಯಲ್ಲಿ ಮಂಡಿಸಿ, ಅಂಬಾನಿ, ಅದಾನಿ ಮುಂತಾದ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ವಿದ್ಯುತ್ ಕ್ಷೇತ್ರವು ನಮ್ಮ ಸಂವಿಧಾನದ 7ನೇ ಶೆಡ್ಯೂಲ್‍ನಲ್ಲಿ ಸಮವರ್ತಿ ಪಟ್ಟಿಯಲ್ಲಿರುವ ಕಾರಣದಿಂದ ಇದರಲ್ಲಿ ಯಾವುದೆ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕಡ್ಡಾಯ ಕುರಿತು ಶಾಸನಸಭೆಗಳಲ್ಲಿ ಚರ್ಚೆ ನಡೆಯಬೇಕು.ಆದರೆ, ಕೇಂದ್ರ ಸರ್ಕಾರ ಒಕ್ಕೂಟ ತತ್ವಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರಗಳಿಗೆ ಯಾವ ಮನ್ನಣೆಯನ್ನೂ ನೀಡದೆ ತಿದ್ದುಪಡಿ ತರಲು ಹೊರಟಿದೆ ಎಂದು ಹರಿಹಾಯ್ದರು.

ಇದುವರೆಗೆ ಕಡು ಬಡವರ ಬದುಕಿಗೆ ಕೊಳ್ಳಿ ಇಡುತ್ತಿದ್ದ ಇವರು ಈಗ ನಗರ, ಗ್ರಾಮೀಣ ಭಾಗದ ಮಧ್ಯಮ ವರ್ಗ, ಮೇಲು, ಮಧ್ಯಮವರ್ಗದವರ ಕುತ್ತಿಗೆಗೂ ನೇಣಿನ ಕುಣಿಕೆ ಬಿಗಿಗೊಳಿಸಲು ಹೊರಟಿದ್ದಾರೆ. ಇದರ ಭಾಗವಾಗಿಯೆ ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಒಪ್ಪಿಸಲು ಹೊರಟಿದೆ. ಜನರ ಕೈಗೆ ಪಾಲಿಸ್ಟರ್ ಧ್ವಜಗಳನ್ನು ಕೊಟ್ಟು ಅಂಬಾನಿ, ಅದಾನಿ ಮುಂತಾದವರ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಹೊರಟಿದೆ ಎಂದು ನಾನು ಹೇಳಿದ್ದು ಇದೇ ಕಾರಣಕ್ಕೆ ಎಂದರು.

ಮೋದಿಯವರು ಕೆಲವೇ ಕಾರ್ಪೊರೇಟ್ ಕಂಪನಿಗಳಿಗೆ ಮಾತ್ರ ಅಚ್ಛೇದಿನ್ ತರಲು ನಿರಂತರವಾಗಿ ಕೆಲಸ ದುಡಿಯುತ್ತಿದ್ದಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹಿಂದಿನ ಸರ್ಕಾರಗಳು ಮತ್ತು ದೇಶದ ಜನ ಕಳೆದ 75 ವರ್ಷಗಳಿಂದ ಕಷ್ಟಪಟ್ಟು ನಿರ್ಮಿಸಿದ್ದ ಬಹುಪಾಲು ಸಂಪತ್ತನ್ನು ಅದಾನಿ, ಅಂಬಾನಿ, ಟಾಟಾ, ವೇದಾಂತ ಮುಂತಾದ ಕೆಲವೆ ಕೆಲವು ಜನರ ಕೈಗೆ ಕೊಟ್ಟು ಸಂಭ್ರಮಿಸುತ್ತಿರುವ ಮೋದಿಯವರ ಸರ್ಕಾರ ಈಗ ವಿದ್ಯುತ್ ಕ್ಷೇತ್ರವನ್ನು ಹರಾಜಿಗಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ದೇಶದ ಪ್ರಗತಿಯ ಮೂಲವಾದ ವಿದ್ಯುತ್‍ನ ಮೇಲಿನ ನಿಯಂತ್ರಣವು ಸರ್ಕಾರಗಳ ಬಳಿಯೇ ಇರಬೇಕು. ಸರ್ಕಾರಗಳ ಬಳಿ ಇದ್ದರೆ ಮಾತ್ರ ಜನರಿಗೆ ಹಕ್ಕಿರುತ್ತದೆ. ಇಲ್ಲದಿದ್ದರೆ ಅದು ಅಂಗಡಿಯ ಸರಕಿನಂತಾಗುತ್ತದೆ. ಕಾರ್ಪೊರೇಟ್ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ಲನ್ನು ವಸೂಲಿ ಮಾಡಬೇಕು. ಒಕ್ಕೂಟ ವ್ಯವಸ್ಥೆಯನ್ನು ದಮನಿಸಿ ಸರ್ವಾಧಿಕಾರಿ ಧೋರಣೆಯನ್ನು ಮೋದಿ ಸರ್ಕಾರ ಬಿಗಿಗೊಳಿಸುತ್ತಿದ್ದರೂ ರಾಜ್ಯದ ಬಿಜೆಪಿ ಸರ್ಕಾರವಾಗಲಿ, ಸಂಸದರುಗಳಾಗಲಿ ಒಂದಿಷ್ಟೂ ಪ್ರತಿಭಟಿಸದೆ ನಾಡಿನ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ವೀಳ್ಯೆದೆಲೆ ಶಾಸ್ತ್ರ ಮಾಡಲು ಬಂದಿದ್ದರಾ ಎಂದ ಬಿ ಕೆ ಹರಿಪ್ರಸಾದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.