ETV Bharat / state

ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ: ಸಿದ್ದರಾಮಯ್ಯ

ಗುಲಾಂ ನಬಿ ಆಜಾದ್ ಅವರಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅಪಾರವಾದುದು. ಅದೇ ರೀತಿ ಕಾಂಗ್ರೆಸ್ ಪಕ್ಷಕ್ಕೂ ಅವರ ಕೊಡುಗೆಯನ್ನು ಅಲ್ಲಗಳೆಯಲಾಗದು ಎಂದು ಸಿದ್ದರಾಮಯ್ಯ ಹೇಳಿದರು.

KN_BNG_06_SIDDU_PRESS_NOTE_SCRIPT_7208077
ಸಿದ್ದರಾಮಯ್ಯ
author img

By

Published : Aug 27, 2022, 7:51 PM IST

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸುಮಾರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಆಜಾದ್ ಅವರು ಪಕ್ಷವನ್ನು ಕಟ್ಟಿ ಬೆಳೆಸಲು ನೀಡಿರುವ ಕೊಡುಗೆಯನ್ನು ಸ್ಮರಿಸುತ್ತಲೇ, ಅವರ ಈ ದಿಡೀರ್ ನಿರ್ಧಾರವನ್ನು ಖಂಡಿಸಬೇಕಾಗಿ ಬಂದಿದೆ.

ಕಾಂಗ್ರೆಸ್ ಪಕ್ಷ ಕಷ್ಟದ ದಿನಗಳಲ್ಲಿದೆ: ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದಾಗಿ ಕಾಂಗ್ರೆಸ್ ಪಕ್ಷ ಕಷ್ಟದ ದಿನಗಳಲ್ಲಿದೆ. ಇದಕ್ಕಿಂತಲೂ ಮುಖ್ಯವಾಗಿ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಂಡಾಂತರದಲ್ಲಿದೆ. ಸಂವಿಧಾನದ ಒಂದೊಂದು ಸ್ಥಂಭಗಳೇ ನಮ್ಮ ಕಣ್ಣೆದುರಿಗೆ ಉರುಳಿ ಬೀಳುತ್ತಿದೆ ಎಂದರು. ಇಂತಹ ಪರಿಸ್ಥಿತಿಯಲ್ಲಿ ಗುಲಾಂ ನಬಿ ಆಜಾದ್ ಅವರಂತಹ ಅಪಾರ ಅನುಭವ ಮತ್ತು ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರ ಅಗತ್ಯ ಪಕ್ಷಕ್ಕೆ ಮಾತ್ರವಲ್ಲ, ದೇಶಕ್ಕೂ ಕೂಡಾ ಇದೆ ಎನ್ನುವುದನ್ನು ನಿರಾಕರಿಸಲಾಗದು.

ಗುಲಾಂ ನಬಿ ಆಜಾದ್ ಅವರಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅಪಾರವಾದುದು, ಅದೇ ರೀತಿ ಕಾಂಗ್ರೆಸ್ ಪಕ್ಷಕ್ಕೂ ಅವರ ಕೊಡುಗೆಯನ್ನು ಅಲ್ಲಗಳೆಯಲಾಗದು ಎಂದಿದ್ದಾರೆ.

ಇಂದಿರಾಗಾಂಧಿ, ರಾಜೀವ್ ಗಾಂಧಿ,ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ನಾಲ್ವರು ಪ್ರಧಾನಿಗಳ ಸಂಪುಟದಲ್ಲಿ ದೀರ್ಘಕಾಲ ಸಚಿವರಾಗಿದ್ದ ಆಜಾದ್ ಅವರು ಪಕ್ಷದ ವಿವಿಧ ಘಟಕಗಳಲ್ಲಿ ಪ್ರಮುಖ ಪದಾಧಿಕಾರಿಯಾಗಿ, ನೀತಿ-ನಿರ್ಧಾರಗಳನ್ನು ಕೈಗೊಳ್ಳುವ ಸಂಸದೀಯ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಚುನಾವಣಾ ಸಮಿತಿಗಳಲ್ಲಿ ಸದಸ್ಯರಾಗಿ ಕೆಲಸ ಮಾಡುವ ಅವಕಾಶವನ್ನು ಪಡೆದಿದ್ದರು.

ಇದೇ ರೀತಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಮತ್ತು ಏಳು ವರ್ಷಗಳ ಕಾಲ ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿದ್ದರು. ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಅವರು ಪಡೆದಿದ್ದಾರೆ.

ಕಷ್ಟದ ಕಾಲದಲ್ಲಿ ಪಕ್ಷದ ಜೊತೆ ನಿಲ್ಲಬೇಕು:

ಪಕ್ಷದ ಒಳ್ಳೆಯ ದಿನಗಳಲ್ಲಿ ಅದರ ಜೊತೆ ಗುರುತಿಸಿಕೊಂಡು ಎಲ್ಲ ಅವಕಾಶಗಳನ್ನು ಪಡೆದ ಯಾವನೇ ವ್ಯಕ್ತಿ ಪಕ್ಷದ ಕಷ್ಟದ ಕಾಲದಲ್ಲಿ ಅದರ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿದೆ. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ಪಕ್ಷವನ್ನು ತ್ಯಜಿಸಿ ಹೋಗಿರುವುದು ಅತ್ಯಂತ ದುರದೃಷ್ಟಕರ ಬೆಳವಣಿಗೆ.

ಕಾಂಗ್ರೆಸ್ ಪಕ್ಷವನ್ನು ತೊರೆದು ಅವರ ಪಾಡಿಗೆ ಅವರು ಹೋಗಿ ಬಿಟ್ಟಿದ್ದರೆ ಅವರಿಗೆ ಶುಭಕೋರಿ ಬೀಳ್ಕೊಡಬಹುದಿತ್ತೇನೋ? ಆದರೆ ಅವರು ತಮ್ಮ ನಿರ್ಗಮನದ ಜೊತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ, ಇದನ್ನು ಕಾಂಗ್ರೆಸ್ ಪಕ್ಷದಲ್ಲಿರುವ ಯಾರೂ ಒಪ್ಪಲು ಸಾಧ್ಯವೇ ಇಲ್ಲ ಎಂದರು.

ಗುಲಾಂ ನಬಿ ಆಜಾದ್ ಅವರು ರಾಜೀನಾಮೆ ನೀಡಿರುವ ಹೊತ್ತು ಮತ್ತು ಅವರ ರಾಜೀನಾಮೆ ಪತ್ರದ ಒಕ್ಕಣೆಯನ್ನು ನೋಡಿದರೆ ತಮಗೆ ಆಗಿರುವ ನೋವನ್ನು ವ್ಯಕ್ತಪಡಿಸುವ ಸದುದ್ದೇಶಕ್ಕಿಂತಲೂ, ನಮ್ಮ ಪ್ರಮುಖ ಎದುರಾಳಿ ಪಕ್ಷವನ್ನು ಖುಷಿಪಡಿಸುವ ದುರುದ್ದೇಶ ಇದ್ದಂತೆ ಕಾಣುತ್ತಿದೆ.

ಇದನ್ನೂ ಓದಿ:ಹಲವು ವರ್ಷ ಎಂಜಾಯ್ ಮಾಡಿ ರಾಜೀನಾಮೆ ನೀಡಿರುವುದು ಸರಿಯಲ್ಲ: ಗುಲಾಂ ನಬಿ ನಡೆಗೆ ಖರ್ಗೆ ಬೇಸರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.