ETV Bharat / state

ಸಿಡಿ ಪ್ರಕರಣ: ಯುವತಿ ಪರಿಸ್ಥಿತಿಗೆ ಆತಂಕ ವ್ಯಕ್ತಪಡಿಸಿದ ಸಿದ್ದರಾಮಯ್ಯ

author img

By

Published : Mar 29, 2021, 11:59 AM IST

ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಲೇಡಿ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮರುಕ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ. ಸರಣಿ ಟ್ವೀಟ್ ಮೂಲಕ ಯುವತಿ ನಿಲುವನ್ನು ಬೆಂಬಲಿಸಿರುವ ಅವರು, ಆಕೆಯ ಸ್ಥಿತಿ ನೆನೆದು ಮರುಕ ವ್ಯಕ್ತಪಡಿಸಿದ್ದಾರೆ. ಟ್ವೀಟ್ ನಲ್ಲಿ ಸಿಡಿ ಹಗರಣದ ಯುವತಿ ತನಗೆ ಪ್ರಾಣಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ ಎಂದಿದ್ದಾರೆ.

siddaramaiah worries about cd lady
ಆತಂಕ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲು ಸಿದ್ಧವಾಗಿರುವ ಸಿಡಿ ಪ್ರಕರಣದ ಯುವತಿ ಪರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಯುವತಿ ನಿಲುವನ್ನು ಬೆಂಬಲಿಸಿರುವ ಅವರು, ಆಕೆಯ ಸ್ಥಿತಿ ನೆನೆದು ಮರುಕ ವ್ಯಕ್ತಪಡಿಸಿದ್ದಾರೆ. ಸಿಡಿ ಹಗರಣದ ಯುವತಿ ತನಗೆ ಪ್ರಾಣಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ರಾಜ್ಯ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಯುವತಿ ಬರೆದ ಪತ್ರದಲ್ಲಿ ಎಸ್​ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ ಎಂದು ಸಿದ್ದರಾಮಯ್ಯ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ಮುಖ್ಯಮಂತ್ರಿ ಬಿಎಸ್​ವೈ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು? ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪರ ವಕೀಲರು ದಾಖಲಿಸಿದ್ದ ದೂರು ಆಧರಿಸಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಡುಗೋಡಿಯಲ್ಲಿರುವ ಟೆಕ್ನಿಕಲ್​​ ಸೆಂಟರ್​​​ಗೆ ಆಗಮಿಸಿ ತನಿಖಾಧಿಕಾರಿಗಳ‌ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮತ್ತೊಂದೆಡೆ ಇವತ್ತು ಯುವತಿ ಕೋರ್ಟ್​ಗೆ ಹಾಜರಾಗಿ ನ್ಯಾಯಾಧೀಶರ ಮುಂದೆ ತನ್ನ ದೂರನ್ನು ನೀಡಲಿದ್ದಾಳೆ ಎನ್ನಲಾಗ್ತಿದೆ.

ಇದನ್ನೂ ಓದಿ:ಸಿಡಿ ಪ್ರಕರಣ:ಮಾಜಿ ಶಾಸಕ ನಾಗರಾಜ್, ವಕೀಲರ ಜೊತೆ ವಿಚಾರಣೆಗೆ ಆಗಮಿಸಿದ ಜಾರಕಿಹೊಳಿ​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.