ETV Bharat / state

ರಾಹುಲ್ ಗಾಂಧಿ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯ - ರಾಹುಲ್ ಗಾಂಧಿಯವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ

ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿಯವರ ಚಾರಿತ್ರ್ಯ ಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು?, ಏನು? ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ- ವಿಪಕ್ಷ ನಾಯಕ ಸಿದ್ದರಾಮಯ್ಯ.

Siddaramaiah thanks people of Karnataka for support to Bharat Jodo yatra
ಭಾರತ ಐಕ್ಯತಾ ಯಾತ್ರೆ
author img

By

Published : Oct 23, 2022, 2:18 PM IST

ಬೆಂಗಳೂರು: ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ವಿಯನ್ನಾಗಿ ಮಾಡಿದ ಕರ್ನಾಟಕದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಭಾರತ ಐಕ್ಯತಾ ಯಾತ್ರೆ ಇಂದು ರಾಜ್ಯದಲ್ಲಿ ಯಶಸ್ವಿಯಾಗಿ ತನ್ನ ನಡಿಗೆ ಪೂರ್ಣಗೊಳಿಸಿರುವ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪುಟ್ಟ ಬಾಲಕ- ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು ಎಂದರು.

Bharat Jodo yatra
ಭಾರತ ಐಕ್ಯತಾ ಯಾತ್ರೆ..

ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ ರಾಹುಲ್ ಗಾಂಧಿಯವರಿಗೆ ಕರ್ನಾಟಕ ಆಭಾರಿಯಾಗಿದೆ ಎಂದಿದ್ದಾರೆ.

ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ. ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿಯವರ ಚಾರಿತ್ರ್ಯ ಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು?, ಏನು? ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ.

ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ದದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಪೂರ್ತಿ ಕೊಟ್ಟಿದೆ. ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ.

ರಾಹುಲ್ ಗಾಂಧಿಯವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯತೆಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಇಂದು 'ಭಾರತ್ ಜೋಡೋ ಯಾತ್ರೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.