ETV Bharat / state

ಇಂದೇ ಮಂಗಳೂರಿಗೆ ಹೋಗ್ತೀನಿ... ಕೇಂದ್ರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಇಬ್ಬರು ಪ್ರತಿಭಟನಾಕಾರರ ಕುಟುಂಬವನ್ನು ಭೇಟಿಯಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

siddaramaiah pressmeet
siddaramaiah pressmeet
author img

By

Published : Dec 20, 2019, 1:11 PM IST

Updated : Dec 20, 2019, 1:49 PM IST

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಇಬ್ಬರ ಕುಟುಂಬವನ್ನು ಭೇಟಿಯಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಕುರಿತು ಮಾತನಾಡಿದ ಅವರು ಮಂಗಳೂರಿನಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಸೂದೆಗಳಿಂದ ಜನ ಕೆರಳಿದ್ದಾರೆ. ಪ್ರಶ್ನಿಸಿದವರನ್ನು ಗುಂಡಿಕ್ಕಿ ಕೊಲ್ಲುತ್ತಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ನಾನು ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಈ ಘಟನೆ ಬ್ರಿಟಿಷರ ಕಾಲಘಟ್ಟವನ್ನು ನೆನಪಿಸುತ್ತದೆ. ಜಲಿಯಾನಾ ವಾಲಾಭಾಗ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಹೇಗೆ ಗುಂಡಿಕ್ಕಿ ಕೊಲ್ಲಲಾಯಿತೋ ಅದೇ ರೀತಿ ಇಲ್ಲೂ ಸಹ ನಡೆಯುತ್ತಿದೆ.

ಕೇಂದ್ರ ಸರ್ಕಾರಕ್ಕೆ ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

ವೈದ್ಯರ ಸಲಹೆ ನಿರ್ಲಕ್ಷಿಸಿ ಪ್ರಯಾಣ: ಜಮೀರ್

ಈ ಮಧ್ಯೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ಜಮೀರ್​ ಅಹಮದ್​ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲ.

ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಆದರೆ, ಅದನ್ನು ಬದಿಗೊತ್ತಿ ನನ್ನ ಜೀವ ಹೋದರೂ ಪರವಾಗಿಲ್ಲ ಎಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಜಮೀರ್​ ಹೇಳಿದರು.

Intro:Body:

ಇಂದು ಸಿದ್ದರಾಮಯ್ಯ ಮಂಗಳೂರಿಗೆ... ಪರಿಸ್ಥಿತಿ ಇನ್ನಷ್ಟು ಉದ್ವಿಗ್ನ ಸಾಧ್ಯತೆ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಇಬ್ಬರು ಪ್ರತಿಭಟನಾಕಾರರ ಕುಟುಂಬವನ್ನು ಭೇಟಿಯಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಕುರಿತು ಮಾತನಾಡಿದ ಅವರು ಮಂಗಳೂರಿನಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಸೂದೆಗಳಿಂದ ಜನ ಕೆರಳಿದ್ದಾರೆ. ಪ್ರಶ್ನಿಸಿದವರನ್ನು ಗುಂಡಿಕ್ಕಿ ಕೊಲ್ಲುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಈ ಘಟನೆ ಬ್ರಿಟಿಷರ ಕಾಲಘಟ್ಟವನ್ನು ನೆನಪಿಸುತ್ತದೆ. ಜಲಿಯಾನಾ ವಾಲಾಭಾಗ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಹೇಗೆ ಗುಂಡಿಕ್ಕಿ ಕೊಲ್ಲಲಾಯಿತೋ ಅದೇ ರೀತಿ ಇಲ್ಲೂ ಸಹ ನಡೆಯುತ್ತಿದೆ. 

ಕೇಂದ್ರ ಸರ್ಕಾರಕ್ಕೆ ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ. 

ವೈದ್ಯರ ಸಲಹೆ ನಿರ್ಲಕ್ಷಿಸಿ ಪ್ರಯಾಣ: ಜಮೀರ್​

ಈ ಮಧ್ಯೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ಜಮೀರ್​ ಅಹಮದ್​ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲ. 

ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಆದರೆ, ಅದನ್ನು ಬದಿಗೊತ್ತಿ ನನ್ನ ಜೀವ ಹೋದರೂ ಪರವಾಗಿಲ್ಲ ಎಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಜಮೀರ್​ ಹೇಳಿದರು. 

Conclusion:
Last Updated : Dec 20, 2019, 1:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.