ETV Bharat / state

ಲವ್ ಜಿಹಾದ್ ತಡೆಗೆ ಕಾನೂನು ರೂಪಿಸುವುದು ಸರ್ಕಾರದ ಹತಾಶ ಪ್ರಯತ್ನ: ಸಿದ್ದರಾಮಯ್ಯ ಕಿಡಿ - ಅಲಹಾಬಾದ್ ಹೈಕೋರ್ಟ್ ತೀರ್ಪು

ಉತ್ತರಪ್ರದೇಶ ರಾಜ್ಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸಲು ಚಿಂತನೆಗಳು ನಡೆಯುತ್ತಿದ್ದು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ‌ನಾಯಕ ಸಿದ್ದರಾಮಯ್ಯ ಟ್ವೀಟ್​ ಮೂಲಕ ಕಿಡಿ ಕಾರಿದ್ದಾರೆ.

Siddaramaiah tweet about love jihad
ಪ್ರತಿಪಕ್ಷ ‌ನಾಯಕ ಸಿದ್ದರಾಮಯ್ಯ
author img

By

Published : Nov 6, 2020, 7:30 PM IST

ಬೆಂಗಳೂರು: ಲವ್ ಜಿಹಾದ್ ತಡೆಗೆ ಕಾನೂನು ರೂಪಿಸುವ ಸಿಎಂ ಘೋಷಣೆ, ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ ಎಂದು ಪ್ರತಿಪಕ್ಷ ‌ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

  • 'ಲವ್ ಜಿಹಾದ್' ತಡೆಗೆ ಕಾನೂನು ರೂಪಿಸುವ @CMofKarnataka
    ಅವರ ಘೋಷಣೆ,
    ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ.

    ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ.
    1/4

    — Siddaramaiah (@siddaramaiah) November 6, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ. ಲವ್ ಜಿಹಾದ್ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಸಿಎಂ ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ? ಎಂದು ಪ್ರಶ್ನಿಸಿದರು.

  • 'ಲವ್ ಜಿಹಾದ್' ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ,
    'ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ' ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, @CMofKarnataka ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?
    2/4

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮತಾಂತರ ಎನ್ನುವುದು ಅಂತರ್ ​ಧರ್ಮೀಯ ಮದುವೆಗೆ ಅಸ್ತ್ರವಾಗಬಾರದು ಎಂದು ತೀರ್ಪು ಹೇಳಿದೆಯೇ ಹೊರತು ಅಂತರ್ ​ಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ. ಸಿಎಂ ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದಿದ್ದಾರೆ.

  • ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು @BJP4Karnataka ನಾಯಕರು ಮಾಡುತ್ತಿದ್ದಾರೆ.

    'ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು' ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.
    3/4

ETV Bharat Logo

Copyright © 2025 Ushodaya Enterprises Pvt. Ltd., All Rights Reserved.