ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.
-
ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ @AmitShah ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ.
— Siddaramaiah (@siddaramaiah) December 30, 2022 " class="align-text-top noRightClick twitterSection" data="
1/6
">ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ @AmitShah ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ.
— Siddaramaiah (@siddaramaiah) December 30, 2022
1/6ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ @AmitShah ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ.
— Siddaramaiah (@siddaramaiah) December 30, 2022
1/6
ನೇಮಕಾತಿ, ವರ್ಗಾವಣೆ, ಬಡ್ತಿ, ಅನುದಾನ ಹಂಚಿಕೆ, ಕಾಮಗಾರಿ ಅನುಷ್ಠಾನ, ಬಿಲ್ ಪಾವತಿ ಹೀಗೆ ಅಡಿಯಿಂದ ಮುಡಿವರೆಗೆ ಶೇ 40ರಷ್ಟು ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ನಾಯಕರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗೆಗೆ ಮಾತನಾಡುವ ಅಮಿತ್ ಶಾ ಅವರ ಭಂಡತನಕ್ಕೆ ಶಹಭಾಸ್ ಅನ್ನಲೇಬೇಕು. ರಾಜ್ಯದಲ್ಲಿ ಆಪರೇಷನ್ ಕಮಲದ ಅನೈತಿಕ ಕೂಸು ರಾಜ್ಯ ಬಿಜೆಪಿ ಸರ್ಕಾರ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಬಂದು, ವಿಧಾನಸೌಧವೇ ಕಮಿಷನ್ ಅಡ್ಡೆಯಾಗಿ ಬದಲಾಗಿದೆ. ಈ ಶೇ 40ರಷ್ಟು ಕಮಿಷನ್‌ನಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಅಮಿತ್ ಶಾ? ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರ ಆತ್ಮಹತ್ಯೆಗೆ ಉತ್ತರ ಕೊಡಿ: ಬೆಳಗಾವಿಯ ಸಂತೋಷ್ ಪಾಟೀಲ್ ಅವರಿಂದ ಹಿಡಿದು ದೇವರಾಯನದುರ್ಗದ ಟಿ.ಎನ್ ಪ್ರಸಾದ್ ವರೆಗೆ ರಾಜ್ಯದ ಬಿಜೆಪಿ ಸರ್ಕಾರದ ಶೇ 40ರಷ್ಟು ಕಮಿಷನ್ ಕಿರುಕುಳಕ್ಕೆ ಬಲಿಯಾದ ಗುತ್ತಿಗೆದಾರರ ಸರಣಿ ಆತ್ಮಹತ್ಯೆಗಳು ನಿಂತಿಲ್ಲ. ಈ ಸಾವುಗಳಿಗೆ ನ್ಯಾಯ ಕೊಡ್ತೀರಾ ಮಿಸ್ಟರ್ ಅಮಿತ್ ಶಾ? ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ಪಾಲಿನ ಜಿಎಸ್‌ಟಿ ಕೊಡಿ: ಕರ್ನಾಟಕದ ಪಾಲಿನ ಜಿಎಸ್‌ಟಿ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಂದಿಲ್ಲ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ, ಅತಿವೃಷ್ಟಿ, ಅನಾವೃಷ್ಟಿ, ಬೆಳೆಹಾನಿ ಪರಿಹಾರ ರೈತರಿಗೆ ಸಿಕ್ಕಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಶೇ 40ರಷ್ಟು ಕಮಿಷನ್‌ನಲ್ಲಿ ನಿಮ್ಮ ಪಾಲು ತಪ್ಪದೆ ಸಂದಾಯ ಆಗುತ್ತಿದೆಯೇ ಅಮಿತ್ ಶಾ ಅವರೇ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ಕಾಲದಲ್ಲಿ ನಿಮ್ಮ ಬಿಜೆಪಿ ಸರ್ಕಾರದ ಸಚಿವರು ಕಮಿಷನ್ ಮುಕ್ಕಿ ತೆಗಿದರು. ನಿರಪರಾಧಿ ಜನ ಆಮ್ಲಜನಕ, ಬೆಡ್, ವೆಂಟಿಲೇಟರ್ ಸಿಗದೆ ಹಾದಿಬೀದಿಯಲ್ಲಿ ಪ್ರಾಣ ಬಿಟ್ಟರು. ನೀವು ತಟ್ಟೆ ಬಾರಿಸಲು ಹೇಳಿ ಜನರನ್ನು ಮಂಗ ಮಾಡಿದಿರಿ. ಇದನ್ನು ರಾಜ್ಯದ ಜನ ಮರೆತಿಲ್ಲ ಮಿಸ್ಟರ್ ಅಮಿತ್ ಶಾ ಎಂದು ಕೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಜನರಿಗೆ ಚಾಕೊಲೇಟ್ ಕೊಡುವ ಕೆಲಸ ಮಾಡುತ್ತಿದೆ: ಡಿಕೆಶಿ