ETV Bharat / state

ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್​ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ: ಸಿದ್ದರಾಮಯ್ಯ - ಈಟಿವಿ ಭಾರತ ಕನ್ನಡ

ನರೇಂದ್ರ ಮೋದಿಯವರ ಜೊತೆ ಮಾತನಾಡುವ ಧೈರ್ಯ ರಾಜ್ಯ ಬಿಜೆಪಿಗೆ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ. ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

siddaramaiah-tweet-against-bjp
ರಾಜ್ಯ ಸರ್ಕಾರದ ಪ್ರಚಾರಕ್ಕೆ ಕೇಂದ್ರ ಸರ್ಕಾರವೇ ತಡೆ: ಸಿದ್ದರಾಮಯ್ಯ ಟ್ವೀಟ್
author img

By

Published : Dec 10, 2022, 5:46 PM IST

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳದ ರಾಜ್ಯ ಸರ್ಕಾರದ ಪ್ರಚಾರಕ್ಕೆ ಕೇಂದ್ರ ಸರ್ಕಾರವೇ ಅಧಿಕೃತವಾಗಿ ತಡೆ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್​ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಲೇವಡಿ ಮಾಡಿದ್ದಾರೆ.

  • ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ @BJP4Karnataka ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ತಕ್ಷಣ @PMOIndia ಅವರನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು @BJP4India ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು.
    ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ?5/6#SocialJustice

    — Siddaramaiah (@siddaramaiah) December 10, 2022 " class="align-text-top noRightClick twitterSection" data=" ">

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಬಿಜೆಪಿ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ ಎಂದು ಸಾಮಾಜಿಕ ನ್ಯಾಯ ಎಂಬ ಟ್ಯಾಗ್ ಲೈನ್ ನಡಿ ವಿವರಿಸಿದ್ದಾರೆ.

ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು. ಆದರೆ ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಚ್ಚರಿಸಿದ್ದಾರೆ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ @BJP4India ಸರ್ಕಾರಕ್ಕೆ ಮಾತ್ರ ಇರುವುದರಿಂದ @BJP4Karnataka ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ.
    4/6#SocialJustice

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ಬಿಜೆಪಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ? ಎಂದು ಪ್ರಶ್ನಿಸಿದ್ದಾರೆ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ @BJP4India ಸರ್ಕಾರವೇ ರಾಜ್ಯ @BJP4Karnataka ಅವರ ಬಣ್ಣ ಬಯಲು ಮಾಡಿದೆ.
    2/6#SocialJustice pic.twitter.com/Z7yDPyMFVi

ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ. ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತ ಬಣ್ಣ ಬಯಲು ಮಾಡಿಕೊಳ್ಳಬೇಡಿ ರಾಜ್ಯ ಬಿಜೆಪಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಇದನ್ನೂ ಓದಿ:2023ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರನ್ನು ಮನೆಗೆ ಕಳಿಸುತ್ತೇವೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.