ETV Bharat / state

ಮೋದಿ ಅಮಾಯಕ ರೈತರ ಹಾದಿ ತಪ್ಪಿಸುತ್ತಿದ್ದಾರೆ.. ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ.. - Siddaramaiah tweet against central government

ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇ. 50ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು ಪ್ರಧಾನಮಂತ್ರಿಗಳ ಘೋಷಣೆಯಾಗಿತ್ತು. ಆದರೆ, ಉತ್ಪಾದನಾ ವೆಚ್ಚದ ಲೆಕ್ಕದಲ್ಲಿಯೇ ಕೇಂದ್ರ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಹೇಳಿದ್ದಾರೆ.

Siddaramaiah tweet against central government
ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟ್ವೀಟ್​
author img

By

Published : Jun 2, 2020, 9:50 PM IST

ಬೆಂಗಳೂರು : ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Siddaramaiah tweet against central government
ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟ್ವೀಟ್​

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ ದೇಶದ ಪ್ರಧಾನಿ ನರೇಂದ್ರ ಮೋದಿ ಇದರಿಂದ ರೈತರ ಬೆಳೆಗೆ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಹೇಳಿಕೊಳ್ಳುತ್ತಿರುವುದು ಅಮಾಯಕ ರೈತರ ಹಾದಿ ತಪ್ಪಿಸುವ ಕುತಂತ್ರ ಎಂದು ಆರೋಪಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ನೀಡಿಲ್ಲ : ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇ. 50ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು ಪ್ರಧಾನಮಂತ್ರಿಗಳ ಘೋಷಣೆಯಾಗಿತ್ತು. ಆದರೆ, ಉತ್ಪಾದನಾ ವೆಚ್ಚದ ಲೆಕ್ಕದಲ್ಲಿಯೇ ಕೇಂದ್ರ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಹೇಳಿದ್ದಾರೆ.

ಕೃಷಿ ತಜ್ಞ ಎಂ.ಎಸ್ ಸ್ವಾಮಿನಾಥನ್ ವರದಿಯ ಪ್ರಕಾರ 'C-2 ಉತ್ಪಾದನಾ ವೆಚ್ಚ' ಎಂದರೆ ಬೀಜ, ಗೊಬ್ಬರ ಮತ್ತು ಹೊರಕೂಲಿಯ ಜೊತೆ ಭೂ ಸವಕಳಿ ವೆಚ್ಚ, ಹೂಡಿದ ಬಂಡವಾಳದ ಮೇಲಿನ ಬಡ್ಡಿ ಮತ್ತು ರೈತ ಕುಟುಂಬದ ಕೂಲಿಯನ್ನೂ ಪರಿಗಣಿಸಬೇಕಾಗುತ್ತದೆ. ಕೇಂದ್ರ ಸರ್ಕಾರ C-2 ಸೂತ್ರ ಪಾಲಿಸಿದೆಯೇ? ಕೃಷಿ ತಜ್ಞ ಸ್ವಾಮಿನಾಥನ್ ವರದಿ ಪ್ರಕಾರ ರೈತರ ಬೆಳೆಗೆ ನೀಡುವ ಯೋಗ್ಯ ಬೆಲೆ ಎಂದರೆ 'C-2 ಉತ್ಪಾದನಾ ವೆಚ್ಚ'ಕ್ಕಿಂತ ಎರಡು ಪಟ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ಎಂದು ಸಲಹೆ ನೀಡಿದ್ದಾರೆ.

ನಯಾಪೈಸೆ ಮನ್ನಾ ಆಗಿಲ್ಲ : ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಮೂಲಕ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಸ್ವಾಮಿನಾಥನ್ ವರದಿ ಹೇಳಿರುವ ಯೋಗ್ಯ ಬೆಲೆಯೇ? ಕೊರೊನಾ ಹಾವಳಿಯ ಈ ಕಾಲದಲ್ಲಿ ರೈತರ ಉತ್ಪಾದನಾ ವೆಚ್ಚ ಗಣನೀಯವಾಗಿ ಏರುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಸಂದರ್ಭಕ್ಕೆ ತಕ್ಕಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸಿ ನೆರವಾಗಬೇಕಾಗಿದ್ದ ಕೇಂದ್ರ ಸರ್ಕಾರ ರೈತರಿಗೆ ಮೋಸ ಮಾಡಿದೆ. ಉದ್ಯಮಿಗಳ ಸಾವಿರಾರು ಕೋಟಿ ರೂ. ಸಾಲ ಮನ್ನಾ ಮಾಡುತ್ತಿರುವ ಪ್ರಧಾನಮಂತ್ರಿ ರೈತರ ಸಾಲವನ್ನು ಒಂದು ಬಾರಿ ಮನ್ನಾ ಮಾಡಿ ಎಂಬ ರೈತರ ಬೇಡಿಕೆಗೆ ಕಿವಿ ಕೊಟ್ಟಿಲ್ಲ. ಯುಪಿಎ ಸರ್ಕಾರ ಸಾಲ ಮನ್ನಾ ಮಾಡಿದ್ದೇ ಕೊನೆ. ಅಲ್ಲಿಂದೀಚೆಗೆ ನಯಾ ಪೈಸೆ ಸಾಲ ಮನ್ನಾ ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.