ETV Bharat / state

ಜಿಎಸ್​ಟಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಕೇಂದ್ರದಿಂದ ರಾಜ್ಯಕ್ಕೆ ದ್ರೋಹ: ಸಿದ್ದರಾಮಯ್ಯ - siddaramaiah tweet on GST Relief

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಅಧಿಕಾರಕ್ಕಿಂತ ರಾಜ್ಯದ ಹಿತ ರಕ್ಷಣೆ ಮುಖ್ಯ. ನಿಮಗೆ ರಾಜ್ಯದ ಜನತೆ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನಮ್ಮ ಜನರ ತೆರಿಗೆ ಹಣದ ಪಾಲನ್ನು ಧೈರ್ಯದಿಂದ ಪ್ರಧಾನಿ ನರೇಂದ್ರ ಮೋದಿ ಬಳಿ ಕೇಳಿ. ನಿಮಗೆ ಧೈರ್ಯವಿಲ್ಲದೆ ಇದ್ದರೆ ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Sep 26, 2020, 12:39 PM IST

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ಪರಿಹಾರ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿ ರಾಜ್ಯಕ್ಕೆ ಅನ್ಯಾಯವೆಸಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯಗಳಿಗೆ ಜಿಎಸ್​ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು ನರೇಂದ್ರ ಮೋದಿ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ದ್ರೋಹಕ್ಕೆ ಪುರಾವೆಯಾಗಿದೆ. ಜಿಎಸ್‌ಟಿ ಪರಿಹಾರ ನೀಡಲು ಸಂಗ್ರಹಿಸಲಾಗುವ ಸೆಸ್ ಮೊತ್ತವನ್ನು ಪ್ರತ್ಯೇಕ ಖಾತೆಯಲ್ಲಿ ಠೇವಣಿ ಮಾಡಬೇಕಾಗುತ್ತದೆ. ನಿರ್ದಿಷ್ಠ ವರ್ಷ ವ್ಯಯವಾಗದೆ ಉಳಿದಿರುವ ಹಣವನ್ನು ಮುಂದಿನ ವರ್ಷಕ್ಕೆ ವರ್ಗಾಯಿಸುವ ಅವಕಾಶ ಕೂಡ ಇದೆ. ಆದರೆ ನರೇಂದ್ರ ಮೋದಿ ಸರ್ಕಾರ ಅನ್ಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದೆ ಎಂದು ಕುಟುಕಿದ್ದಾರೆ.

ನಿರ್ದಿಷ್ಟ ಉದ್ದೇಶಕ್ಕೆ ಸಂಗ್ರಹಿಸಲಾಗುವ ಸೆಸ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಾನೂನು ಉಲ್ಲಂಘನೆಯಾಗಿದೆ. ಆದರೆ ಕೇಂದ್ರ ಸರ್ಕಾರ ಜಿಎಸ್​​ಟಿ ಪರಿಹಾರ ನಿಧಿಯ ಹಣವನ್ನು ಕನ್ಸಾಲಿಡೇಟೆಡ್ ಫಂಡ್​​ಗೆ ವರ್ಗಾಯಿಸಿ ಜಿಎಸ್‌ಟಿ ಕಾಯ್ದೆಯ ಉಲ್ಲಂಘನೆ ಮಾಡಿದೆ. ಕರ್ನಾಟಕಕ್ಕೆ 2021ರ ಅಂತ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ. 30,000 ಕೋಟಿ. ಇದನ್ನು ನಿರಾಕರಿಸಿ, ಆರ್‌ಬಿಐನಿಂದ ಸಾಲ ಎತ್ತಲು ಹೇಳಿರುವ ನರೇಂದ್ರ ಮೋದಿ ಸರ್ಕಾರ, ಜಿಎಸ್‌ಟಿ ಪರಿಹಾರಕ್ಕಾಗಿಯೇ ಸಂಗ್ರಹಿಸಿರುವ ಸೆಸ್ ದುಡ್ಡನ್ನು ತನ್ನ ಖಾಲಿ ಖಜಾನೆಯನ್ನು ತುಂಬಲು ದುರುಪಯೋಗ ಮಾಡಿಕೊಂಡಿದೆ ಎಂದಿದ್ದಾರೆ.

ಜಿಎಸ್​ಟಿ ಪರಿಹಾರಕ್ಕಾಗಿ 2017-18 ಮತ್ತು 2018-19ರಲ್ಲಿ ಕ್ರಮವಾಗಿ ರೂ. 56,146 ಕೋಟಿ ಮತ್ತು 54,275 ಕೋಟಿ ಸೆಸ್ ಹಣ ವರ್ಗಾವಣೆಯಾಗಿದೆ. ಉಳಿಕೆ ಸೆಸ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿರುವ ಮೋದಿ ಸರ್ಕಾರದ ಈ ಅಕ್ರಮದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಅಧಿಕಾರಕ್ಕಿಂತ ರಾಜ್ಯದ ಹಿತ ರಕ್ಷಣೆ ಮುಖ್ಯ. ನಿಮಗೆ ರಾಜ್ಯದ ಜನತೆ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನಮ್ಮ ಜನರ ತೆರಿಗೆ ಹಣದ ಪಾಲನ್ನು ಧೈರ್ಯದಿಂದ ಪ್ರಧಾನಿ ನರೇಂದ್ರ ಮೋದಿ ಬಳಿ ಕೇಳಿ. ನಿಮಗೆ ಧೈರ್ಯವಿಲ್ಲದೆ ಇದ್ದರೆ ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.