ಬೆಂಗಳೂರು: ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಗೊಂದಲದ ಹೇಳಿಕೆಗಳನ್ನು ನೀಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಆರೋಗ್ಯ ಇಲಾಖೆಯ ದಾಖಲೆ ಪ್ರಕಾರ 2020ರ ಡಿಸೆಂಬರ್ವರೆಗಿನ ಕೊರೊನಾ ಸಂಬಂಧಿತ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿ ಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಸಾವಿನ ಸಂಖ್ಯೆ- 22,320. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೇ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಕೇಳಿದ್ದಾರೆ.
-
According to @DHFWKA, number of #Covid19 deaths till Dec 2020 is 12,090.
— Siddaramaiah (@siddaramaiah) March 27, 2021 " class="align-text-top noRightClick twitterSection" data="
According to Planning & Statistical dept, it is 22,320 till Dec 2020.@CMofKarnataka, @mla_sudhakar,
Which of the above data is true?
1/4#coronavirus pic.twitter.com/NJ8L3My0lp
">According to @DHFWKA, number of #Covid19 deaths till Dec 2020 is 12,090.
— Siddaramaiah (@siddaramaiah) March 27, 2021
According to Planning & Statistical dept, it is 22,320 till Dec 2020.@CMofKarnataka, @mla_sudhakar,
Which of the above data is true?
1/4#coronavirus pic.twitter.com/NJ8L3My0lpAccording to @DHFWKA, number of #Covid19 deaths till Dec 2020 is 12,090.
— Siddaramaiah (@siddaramaiah) March 27, 2021
According to Planning & Statistical dept, it is 22,320 till Dec 2020.@CMofKarnataka, @mla_sudhakar,
Which of the above data is true?
1/4#coronavirus pic.twitter.com/NJ8L3My0lp
ಕೊರೊನಾ ಉಲ್ಭಣಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳೇ ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ ಎಂದಿದ್ದಾರೆ.
ಬಿಜೆಪಿ ಸರ್ಕಾರ ಸುಳ್ಳು ಹೇಳಿರುವುದು ಕೊರೊನಾ ಸಂಬಂಧಿತ ಸಾವಿನ ಪ್ರಮಾಣದ ಬಗ್ಗೆ ಮಾತ್ರ ಅಲ್ಲ. ಔಷಧಿ, ಮಾಸ್ಕ್, ಸ್ಯಾನಿಟೈಸರ್, ಪಿಪಿ ಕಿಟ್ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಸರ್ಕಾರ ಮತ್ತು ಆರೋಗ್ಯ ಸಚಿವ ಸುಧಾಕರ್ ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ನನ್ನನ್ನು ಯುವತಿ ಭೇಟಿ ಮಾಡಿಲ್ಲ, ನರೇಶ್ ನನಗೆ ಬೇಕಾದ ಹುಡುಗ: ಡಿಕೆಶಿ
ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕು. ಕೊರೊನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ ಎಂದು ತಿಳಿಸಿದ್ದಾರೆ.