ETV Bharat / state

ನಾಲ್ಕು ಕಿಮೀ ಎಡವದೇ ನಡೆದುಕೊಂಡು ಹೋಗಿ: ಬಿಜೆಪಿ ಯಾತ್ರೆಗೆ ಸಿದ್ದರಾಮಯ್ಯ ಸವಾಲು​ - siddaramaiah tweet against janasankalpa yatre

ಚುನಾವಣೆ ಹತ್ತಿರ ಬಂದಂತೆ ಆರೋಪ ಪ್ರತ್ಯಾರೋಪಗಳು ಹೆಚ್ಚುತ್ತಿದೆ. ಬಿಜೆಪಿಯ ಜನಸಂಕಲ್ಪ ಯಾತ್ರೆಯ ಬಗ್ಗೆ ಮತ್ತು ಮಾಜಿ, ಹಾಲಿ ಸಿಎಂಗಳ ಕುರಿತು ಸಿದ್ದರಾಮಯ್ಯ ಸರಣಿ ಟ್ವೀಟ್​​ ಮಾಡಿ ಕುಟುಕಿದ್ದಾರೆ.

siddaramaiah-tweet-against-janasankalpa-yatre
ಸಿದ್ದರಾಮಯ್ಯ ಚಾಲೆಂಜ್​
author img

By

Published : Oct 12, 2022, 10:02 PM IST

Updated : Oct 12, 2022, 10:37 PM IST

ಬೆಂಗಳೂರು : ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಯಾತ್ರೆ ಪ್ರಾರಂಭಿಸಿವೆ. ಒಂದೆಡೆ ಕಾಂಗ್ರಸ್​ ಭಾರತ್​ ಜೋಡೋ ಮಾಡುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಜನಸಂಕಲ್ಪ ಯಾತ್ರೆ ನಿನ್ನೆಯಿಂದ ಆರಂಭಿಸಿದೆ. ಈ ನಡುವೆ ನಾಯಕರ ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ನಾಯಕರು ಭಾರತ್​ ಜೋಡೋ ಬಗ್ಗೆ ನಾಲಿಗೆ ಹರಿ ಬಿಟ್ಟರೆ, ಇತ್ತ ಕಾಂಗ್ರೆಸ್​ನವರು ಜನಸಂಕಲ್ಪ ಯಾತ್ರೆ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಜೆಪಿಯ ಜನಸಂಕಲ್ಪ ಯಾತ್ರೆಯ ಬಗ್ಗೆ ಸರಣಿ ಟ್ವೀಟ್​​ ಮಾಡಿರುವ ಸಿದ್ದರಾಮಯ್ಯ ಮಾಜಿ ಮತ್ತು ಹಾಲಿ ಮುಖ್ಯ ಮಂತ್ರಿಗೆ ಸವಾಲ್ ಹಾಕಿದ್ದಾರೆ.

ನಡೆದು ಯಾತ್ರೆ ಮಾಡಿ ತೋರಿಸಿ : ಬಡಾಯಿ ಬೊಮ್ಮಾಯಿ ಎಂದು ಸರಣಿ ಟ್ವೀಟ್ ಮೂಲಕ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು.. 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಜನ ನಿಮ್ಮ ದ್ರೋಹ ಮರೆಯಲ್ಲ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಸವರಾಜ್ ಬೊಮ್ಮಾಯಿ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪ ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಹೇಳಿದ್ದಾರೆ.

ಕಂತು ಪಾವತಿಸಿದಿದ್ದರೆ ಮನೆಗೆ : ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬಸವರಾಜ್ ಬೊಮ್ಮಾಯಿ ಅವರೊಬ್ಬ'ಎರಡುವರೆ ಸಾವಿರ ಕೋಟಿ ರೂಪಾಯಿಯ 'ಪೇ-ಸಿಎಂ' ಹೈಕಮಾಂಡ್​ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ಟೀಕಿಸಿ ಮತ್ತೆ ಪೇ ಸಿಎಂ ಪ್ರಸ್ತಾಪಿಸಿದ್ದಾರೆ.

ಮೋದಿ ಅವರು ವಿಶ್ವಗುರು ಅಲ್ಲ ಪುಕ್ಕಲ : ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿಎಸ್ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸವಾಲು ಎಸೆದರು.

ಪಾಪ, ಬಿಎಸ್ ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.

ಮೀಸಲಾತಿ ನಾಟಕ : ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ರಾಷ್ಟ್ರೀಯ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ ಮುಖಂಡ ಎನ್.ಆರ್.ರಮೇಶ್

Last Updated : Oct 12, 2022, 10:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.