ETV Bharat / state

ರಾಜ್ಯ ಚುನಾವಣಾ ಆಯೋಗ ಬಿಜೆಪಿ ಸರ್ಕಾರ ಹಾಕಿದ ತಾಳಕ್ಕೆ ತಕ್ಕಂತೆ ಕುಣಿದಿದೆ: ಸಿದ್ದರಾಮಯ್ಯ - ಬೆಂಗಳೂರು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಸುದ್ದಿ

ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಚುನಾವಣೆ ಎದುರಿಸಲಾಗದ ಪುಕ್ಕಲು ಸರ್ಕಾರ ನಾಮ ನಿರ್ದೇಶನದ ಸದಸ್ಯರ ಮೂಲಕ ಅಡ್ಡ ಮಾರ್ಗದಲ್ಲಿ ಗ್ರಾಮ ಪಂಚಾಯತ್​ ಮೇಲೆ ಸ್ವಾಮ್ಯ ಸ್ಥಾಪಿಸಲು ಹೊರಟಿರುವುದು ನಾಚಿಕೆಗೇಡಿನ ನಡವಳಿಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Siddaramaiah tweet against state government
ಸಿದ್ದರಾಮಯ್ಯ ಸರಣಿ ಟ್ವೀಟ್​​
author img

By

Published : May 29, 2020, 9:43 AM IST

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತ್​ ಚುನಾವಣೆ ಮುಂದೂಡಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

Siddaramaiah tweet against state government
ಸಿದ್ದರಾಮಯ್ಯ ಸರಣಿ ಟ್ವೀಟ್​​

ಸರಣಿ ಟ್ವೀಟ್​​ಗಳ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಗ್ರಾಮ ಪಂಚಾಯತ್​ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ‌ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ ಬಗೆದ ಅಪಚಾರ. ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ನ್ಯಾಯಾಲಯದಲ್ಲಿ‌ ಪ್ರಶ್ನಿಸಲಿದೆ. ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುವ ಮೂಲಕ ರಾಜ್ಯ ಚುನಾವಣಾ ಆಯೋಗ ರಾಜ್ಯ ಬಿಜೆಪಿ ಸರ್ಕಾರ ಹಾಕಿದ ತಾಳಕ್ಕೆ ತಕ್ಕ ಹಾಗೆ ಕುಣಿದಿದೆ. ಇದೊಂದು ಕೆಟ್ಟ ಸಂಪ್ರದಾಯ ಎಂದಿದ್ದಾರೆ.

ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಚುನಾವಣೆ ಎದುರಿಸಲಾಗದ ಪುಕ್ಕಲು ಸರ್ಕಾರ ನಾಮ ನಿರ್ದೇಶನದ ಸದಸ್ಯರ ಮೂಲಕ ಅಡ್ಡ ಮಾರ್ಗದಲ್ಲಿ ಗ್ರಾಮ ಪಂಚಾಯತ್​ ಮೇಲೆ ಸ್ವಾಮ್ಯ ಸ್ಥಾಪಿಸಲು ಹೊರಟಿರುವುದು ನಾಚಿಕೆಗೇಡಿನ ನಡವಳಿಕೆ.

ಚುನಾವಣೆ ಮುಂದೂಡಿಕೆ ನಮಗೆ ಅನಿರೀಕ್ಷಿತವೇನಲ್ಲ. ಇಂತಹದ್ದೊಂದು ಅನುಮಾನದಿಂದಲೇ ನಾವು ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದೆವು. ನಮ್ಮ ಅನುಮಾನ‌ ಈಗ ನಿಜವಾಗಿದೆ. ಇದರ ವಿರುದ್ಧ ಗ್ರಾಮ ಪಂಚಾಯತ್​ ಮಟ್ಟದಲ್ಲಿಯೇ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದಿದ್ದಾರೆ.

ಕರ್ನಾಟಕ ಪಂಚಾಯತ್ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ನಡೆಸದೆ ಆಡಳಿತ ಸಮಿತಿ ರಚಿಸುವಂತಿಲ್ಲ. ಈ ಅಕ್ರಮವನ್ನು ನ್ಯಾಯಾಲಯದ ಗಮನಕ್ಕೆ ತರುತ್ತೇವೆ. ಅಲ್ಲಿ ನ್ಯಾಯ ಸಿಗುವ ಸಂಪೂರ್ಣ ಭರವಸೆ ನಮಗಿದೆ ಎಂದು ಹೇಳಿದ್ದಾರೆ.

ಕೊರೊನಾ ಹಾವಳಿಯಿಂದ ತತ್ತರಿಸಿ ಹೋಗಿರುವ ಜನರ ನೆರವಿಗೆ ಬಾರದ ನಿಷ್ಕ್ರಿಯ ಸರ್ಕಾರಕ್ಕೆ ಚುರುಕು ಮುಟ್ಟಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆದ ಸ್ಪೀಕ್ ಅಪ್​ ಇಂಡಿಯಾ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. ಇದರಲ್ಲಿ ಭಾಗವಹಿಸಿರುವ ಶಾಸಕರು, ಸಂಸದರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.