ETV Bharat / state

ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಟ್ವೀಟ್​ - ಬೆಂಗಳೂರು ಅತ್ಯಾಚಾರ

ಸಾಮೂಹಿಕ ಅತ್ಯಾಚಾರಗಳ ಕುರಿತು ಆತಂಕ ವ್ಯಕ್ತಪಡಿಸಿರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಈ ಕುರಿತು ಪ್ರಸ್ತುತ ಸರ್ಕಾರದ ಆಡಳಿತ ವೈಫಲ್ಯ ಹೊಂದಿದೆ ಎಂದು ಸರಣಿ ಟ್ವೀಟ್​​ ಮಾಡಿದ್ದಾರೆ.

cng
ಮಾಜಿನ ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : Apr 1, 2023, 3:32 PM IST

ಬೆಂಗಳೂರು: ಮಹಾನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಸಾಮೂಹಿಕ ಅತ್ಯಾಚಾರಗಳು ರಾಜ್ಯದ ಕಾನೂನು ಸುವ್ಯವಸ್ಥೆ ಜೀವಂತವಾಗಿದೆಯೇ ಎಂಬ ಅನುಮಾನ ಮೂಡಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಅತ್ಯಾಚಾರಗಳ ಕುರಿತು ಆತಂಕ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

  • ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ. 1/5

    — Siddaramaiah (@siddaramaiah) April 1, 2023 " class="align-text-top noRightClick twitterSection" data=" ">

ಜೊತೆಗೆ ಅಸಮರ್ಥ ಗ್ರಹ ಸಚಿವರಿಂದಾಗಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಿದೆ ಎಂಬ ಆರೋಪ ಸಹ ಮಾಡಿದ್ದಾರೆ. ತಾವು ಮಾಡಿರುವ ಸರಣಿ ಟ್ವೀಟ್​​ನಲ್ಲಿ ಸಿದ್ದರಾಮಯ್ಯ, ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದಿದ್ದಾರೆ.

ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್​​ಗಳು, ಕೊಲೆಗಡುಕರಿಗೆ ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ. ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ ಎಂದಿದ್ದಾರೆ.

ಕಠಿಣ ಕ್ರಮದ ಭರವಸೆ ನೀಡುವ ಗೃಹ ಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ‌ ಮಾಡುತ್ತೇನೆ ಎಂದು ಒತ್ತಾಯಿಸಿದ್ದಾರೆ.

  • ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ @BJP4Karnataka ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ. 2/5#LawAndOrder

ಕಾಂಗ್ರೆಸ್ ಟ್ವೀಟ್: ರಾಜ್ಯ ಕಾಂಗ್ರೆಸ್ ಸಹ ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆ ಕರ್ನಾಟಕ ತಲೆ ತಗ್ಗಿಸುವಂತಹದ್ದು. ಯುಪಿಯಲ್ಲಿ ಕೇಳಿಬರುತ್ತಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಹೇಯ ಕೃತ್ಯ ನಡೆದಿದೆ, ಇದೇನಾ ನೀವು ಹೇಳುವ ಯುಪಿ ಮಾಡೆಲ್ ರಾಜ್ಯ ಬಿಜೆಪಿ? ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸದ ಆರಗ ಜ್ಞಾನೇಂದ್ರ ಅವರು ಸಂತ್ರಸ್ತೆಯದ್ದೇ ತಪ್ಪು ಎಂದರೂ ಅಚ್ಚರಿ ಇಲ್ಲ! ಎಂದು ಬೇಸರ ವ್ಯಕ್ತಪಡಿಸಿದೆ.

  • ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ.
    ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ @JnanendraAraga ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ. 4/5#LawAndOrder

ಘಟನೆ ಏನು?: ಸ್ನೇಹಿತರೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಬಲವಂತವಾಗಿ ನಾಲ್ವರು ಕಾರಿನಲ್ಲಿ ಕರೆದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕೃತ್ಯವೆಸೆಗಿದ ನಾಲ್ವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಪರಿಚಿತರಿಂದಲೇ ಕೃತ್ಯ ನಡೆದಿದೆ. 19 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಬೆಂಗಳೂರು ಹೊರವಲಯದ ರೆಸಾರ್ಟ್​ನಲ್ಲಿ ಅಭಿಪ್ರಾಯ ಸಂಗ್ರಹ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.