ETV Bharat / state

ಮೈಸೂರು ಪ್ರಕರಣ: ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು ಸುವ್ಯವಸ್ಥೆಗೆ ಸಾಕ್ಷಿ ಎಂದ ಸಿದ್ದರಾಮಯ್ಯ

ಸಿಎಂ ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Aug 25, 2021, 9:52 PM IST

ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು - ಸುವ್ಯವಸ್ಥೆಗೆ ಸಾಕ್ಷಿ‌ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ.‌@CMofKarnataka ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು.#LawlessKarnataka
    2/2

    — Siddaramaiah (@siddaramaiah) August 25, 2021 " class="align-text-top noRightClick twitterSection" data=" ">
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು. ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ. ಸಿಎಂ ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಕೆಲ ದಿನಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ದರೋಡೆ, ಲೂಟಿ, ದಾಳಿ, ಚೈನ್ ಸ್ನಾಚಿಂಗ್​​ ಪ್ರಕರಣ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಮೈಸೂರಿನ ಜನರು ಭಯಭೀತರಾಗಿದ್ದಾರೆ. ತಮ್ಮ ಆಂತರಿಕ ರಾಜಕೀಯವನ್ನು ಬದಿಗೊತ್ತಿ, ಬಿಜೆಪಿ ಸರ್ಕಾರ ರಾಜ್ಯದ ಜನರ ಭದ್ರತೆಗೆ ಹೆಚ್ಚಿನ ಒತ್ತು ಕೊಡಬೇಕು. ಸಿಎಂ ಹಾಗೂ ಗೃಹ ಸಚಿವರು ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.