ETV Bharat / state

ಕೋವಿಡ್ ಲಸಿಕಾ ಕೇಂದ್ರಕ್ಕೆ ಬರುವ 100ರಲ್ಲಿ 20 ಮಂದಿಗೆ ಮಾತ್ರ ನೀಡಿಕೆ: ಸಿದ್ದರಾಮಯ್ಯ ಬೇಸರ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಲಸಿಕೆ ಪೂರೈಕೆ ವಿಚಾರವಾಗಿ ಮಾತನಾಡಿದ್ದು, ವ್ಯಾಕ್ಸಿನ್​ ಅಭಾವದಿಂದ ರಾಜ್ಯದಲ್ಲಿ ಶೇ.50 ರಷ್ಟು ಲಸಿಕಾ ಕೇಂದ್ರಗಳು ಸ್ಥಗಿತಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Jul 14, 2021, 6:49 PM IST

ಬೆಂಗಳೂರು: ಕೋವಿಡ್ ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇ.50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿ. ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿದ್ದಾರೆ.

100 ಕ್ಕೆ 20 ಜನರಿಗೆ ಮಾತ್ರ ಲಸಿಕೆ:

ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ 100 ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇ.20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈ ತೋರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ? ಎಂದರು.

ಗ್ರಾಮೀಣ ಭಾಗದಲ್ಲಿವೆ ಹೆಚ್ಚಿನ ಲಸಿಕಾ ಕೇಂದ್ರಗಳು:

ರಾಜ್ಯದಲ್ಲಿರುವ 8,500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ. ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಡೋಸ್​​​ಗಳಂತೆ ಒಟ್ಟು 9.6 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ಧತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈ ಕಟ್ಟಿ ಕೂತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಡಿಕೇರಿಯಲ್ಲಿ ಭಾರೀ ಮಳೆ: 6 ಕುಟುಂಬಗಳ ಸ್ಥಳಾಂತರ, ಧರೆಗುರುಳಿದ ವಿದ್ಯುತ್ ಕಂಬ, ಮರಗಳು

ಆಶ್ವಾಸನೆ ಹುಸಿ:

ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ.

ಹೀಗಾದರೆ ಮುಂದೇನು?

ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಸುಳ್ಳಿನ ಸೇರ್ಪಡೆ ಅಷ್ಟೇ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.