ಬೆಂಗಳೂರು : ನಗರದ ಉತ್ತರಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಇಂದು ಸಿದ್ದರಾಮಯ್ಯ ಅವರು ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಶ್ರೀ ರಾಘವೇಂದ್ರ ವೈಭವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳುವ ಸಲುವಾಗಿ ಉತ್ತರಹಳ್ಳಿಗೆ ಆಗಮಿಸಿದ್ದರು. ಈ ಸಂದರ್ಭ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಓದಿ:ಸಿಎಂ ರೇಸ್‌ನಲ್ಲಿ ಸಿದ್ದರಾಮಯ್ಯ ಒಬ್ಬರೇ ಇಲ್ಲ, ಪಕ್ಷದ ಹಲವು ಹಿರಿಯರಿದ್ದಾರೆ.. ಕೆ ಹೆಚ್ ಮುನಿಯಪ್ಪ
ಶಾಸಕರಾದ ಬೈರತಿ ಸುರೇಶ್, ಮಾಜಿ ಶಾಸಕರಾದ ಶ್ರೀನಿವಾಸ್, ಅಶೋಕ್ ಪಟ್ಟಣ್, ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ ಭಟ್ ಮತ್ತಿತರರು ಹಾಜರಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.