ಬೆಂಗಳೂರು: ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಸಮುದಾಯದ ಬಹುಕಾಲದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು ಎಂದಿದ್ದಾರೆ.
ಅದರ ಶಿಫಾರಸಿನ ಆಧಾರದಲ್ಲಿ ಕಾಡು ಕುರುಬ ಜಾತಿ ಸೂಚಕಕ್ಕೆ ಸಮನಾರ್ಥ ಹೊಂದಿರುವ ಬೆಟ್ಟ ಕುರುಬರನ್ನು ಕೂಡಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಸುಮಾರು ಎರಡೂವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
-
ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ @BJP4India ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ. ಈ ಸಮುದಾಯದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು.
— Siddaramaiah (@siddaramaiah) September 14, 2022 " class="align-text-top noRightClick twitterSection" data="
ಮೀಸಲಾತಿಯ ಲಾಭ ಪಡೆದು ಬೆಟ್ಟ ಕುರುಬ ಸಮುದಾಯ ಸರ್ವತೋಮುಖ ಅಭಿವೃದ್ದಿ ಸಾಧಿಸಲಿ. pic.twitter.com/fXu8t6kmfa
">ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ @BJP4India ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ. ಈ ಸಮುದಾಯದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು.
— Siddaramaiah (@siddaramaiah) September 14, 2022
ಮೀಸಲಾತಿಯ ಲಾಭ ಪಡೆದು ಬೆಟ್ಟ ಕುರುಬ ಸಮುದಾಯ ಸರ್ವತೋಮುಖ ಅಭಿವೃದ್ದಿ ಸಾಧಿಸಲಿ. pic.twitter.com/fXu8t6kmfaಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ @BJP4India ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ. ಈ ಸಮುದಾಯದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು.
— Siddaramaiah (@siddaramaiah) September 14, 2022
ಮೀಸಲಾತಿಯ ಲಾಭ ಪಡೆದು ಬೆಟ್ಟ ಕುರುಬ ಸಮುದಾಯ ಸರ್ವತೋಮುಖ ಅಭಿವೃದ್ದಿ ಸಾಧಿಸಲಿ. pic.twitter.com/fXu8t6kmfa
ಇಲ್ಲಿಯವರೆಗೆ ಮೀಸಲಾತಿ ಸೌಲಭ್ಯದಿಂದಲೇ ವಂಚಿತರಾಗಿದ್ದ ಬೆಟ್ಟ ಕುರುಬ ಸಮುದಾಯದ ಜನ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯ ಲಾಭ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶ - ಪ್ರಾತಿನಿಧ್ಯ ಪಡೆದು ಬೆಳೆಯಲಿ ಎಂದು ಆಶಿಸುತ್ತೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಬೆಟ್ಟ ಕುರುಬ ಜಾತಿ ಎಸ್ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರದ ಒಪ್ಪಿಗೆ