ETV Bharat / state

ಸುತ್ತೂರು ಶ್ರೀಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಸಿದ್ದರಾಮಯ್ಯ

ಮೈಸೂರಿನ ಶಿವರಾತ್ರಿ ದೇಶಿಕೇಂದ್ರ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವೆಬಿನಾರ್ ಮೂಲಕ ಭಾಗವಹಿಸಲಿದ್ದು, ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಕುರಿತಾದ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

Siddaramaiah
Siddaramaiah
author img

By

Published : Aug 29, 2020, 11:10 AM IST

ಬೆಂಗಳೂರು: ಮೈಸೂರಿನ ಸುತ್ತೂರು ಮಠದಲ್ಲಿ ಇಂದು ನಡೆಯುವ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 105ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆನ್‌ಲೈನ್ ಮೂಲಕ ಭಾಗವಹಿಸಲಿದ್ದಾರೆ.

ಇಂದು ಮೈಸೂರಿನ ಶಿವರಾತ್ರಿ ದೇಶಿಕೇಂದ್ರ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವೆಬಿನಾರ್ ಮೂಲಕ ಭಾಗವಹಿಸಲಿದ್ದು, ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಕುರಿತಾದ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

ಕೊರೊನಾ ರೋಗಕ್ಕೆ ಚಿಕಿತ್ಸೆ ಪಡೆದು ಹಿಂದಿರುಗಿರುವ ಸಿದ್ದರಾಮಯ್ಯ ಸದ್ಯ ತಮ್ಮ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಯಾವುದೇ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ಜೊತೆಗೆ ಸಾರ್ವಜನಿಕರ ಭೇಟಿಯನ್ನು ನಿಲ್ಲಿಸಿದ್ದಾರೆ. ಇನ್ನೂ ಕೆಲ ದಿನ ವಿಶ್ರಾಂತಿ ಅಗತ್ಯವಿರುವ ಹಿನ್ನೆಲೆ ತಮ್ಮ ತವರು ಜಿಲ್ಲೆಯಲ್ಲಿ ನಡೆಯುವ ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆನ್‌ಲೈನ್ ವ್ಯವಸ್ಥೆ ಮೊರೆ ಹೋಗಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಹಲವು ಕಾರ್ಯಕ್ರಮಗಳಲ್ಲಿ ಕೂಡ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿಲ್ಲ. ಕೊರೊನಾ ಪಾಸಿಟಿವ್ ಬರುವ ಕೆಲ ದಿನಗಳ ಮುಂಚೆಯೇ ಅವರು ತಮ್ಮ ನಿವಾಸಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಲ್ಲಿಸಿದ್ದರು. ಇದೀಗ ವಿಶ್ರಾಂತಿಯಲ್ಲಿರುವ ಹಿನ್ನೆಲೆ ಯಾವುದೇ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.