ಬೆಂಗಳೂರು: ಗೃಹ ಸಚಿವ ಎಸ್. ಆರ್. ಬೊಮ್ಮಾಯಿ ಕೊರೊನಾದಿಂದ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹಾರೈಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗೃಹ ಸಚಿವ ಎಸ್. ಆರ್. ಬೊಮ್ಮಾಯಿ ಅವರು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಇಂದು ಬೆಳಿಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದರು.
ಸಿಎಂ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ಮುಖಂಡರು ಗೃಹಸಚಿವರ ಆರೋಗ್ಯ ಚೇತರಿಕೆಗೆ ಹಾರೈಸಿದ್ದಾರೆ.