ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಾಡಿನ ಸಮಸ್ತ ಜನತೆಗೆ ನಾಗರಪಂಚಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮಾಡುವ ಮೂಲಕ ನಾಡಿನ ಜನತೆಗೆ ಶುಭಾಶಯ ಸಲ್ಲಿಸಿರುವ ಸಿದ್ದರಾಮಯ್ಯ, ಕೊರೊನಾ ಬಾಧಿಸುತ್ತಿರುವ ಇಂತಹ ದುರಿತ ಕಾಲದಲ್ಲಿ ಹಬ್ಬದ ಆಚರಣೆಯಲ್ಲಿ ಭಕ್ತಿಯೇ ಪ್ರಧಾನವಾಗಲಿ. ದಾನ, ಧರ್ಮದಲ್ಲಿ ಹಬ್ಬದ ಸಂಭ್ರಮವನ್ನು ಕಾಣೋಣ. ಇತರರಿಗೆ ನೆರವಾಗೋಣ, ಹಬ್ಬದ ಸಂಭ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿಸೋಣ. ತಮಗೆಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ನಾಗರಪಂಚಮಿ ಹಬ್ಬದ ಶುಭಾಶಯಗಳು. ನಾಗರಪಂಚಮಿಯ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಆತ್ಮೀಯ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ಸಹ ಜನತೆಗೆ ನಾಗರಪಂಚಮಿ ಹಬ್ಬದ ಶುಭಾಶಯ ಸಲ್ಲಿಸಿದ್ದಾರೆ.