ETV Bharat / state

ರೈತರ ಕಷ್ಟಕ್ಕೆ ಸ್ಪಂದಿಸಿ, ಅವರ ಸಂಕಟ ನಿವಾರಿಸಿ ; ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ - ಸಿದ್ದರಾಮಯ್ಯ

ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆಯು ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ..

Siddaramaiah
Siddaramaiah
author img

By

Published : Sep 8, 2020, 5:04 PM IST

ಬೆಂಗಳೂರು : ಯೂರಿಯಾ ಕೊರತೆ ನೀಗಿಸಿ ರೈತರ ಕಷ್ಟ ನಿವಾರಿಸಿ. ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರು ಯೂರಿಯಾ ರಸಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಯೂರಿಯಾ ತರಿಸಿಕೊಂಡು ರೈತರ ಸಂಕಷ್ಟ ಪರಿಹರಿಸಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Siddaramaiah
ಸಿದ್ದರಾಮಯ್ಯ ಸಿಎಂಗೆ ಬರೆದ ಪತ್ರ

ಈ ಕುರಿತು ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಕೆಲವು ದಿನಗಳಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ‘ಯೂರಿಯಾ’ ಸಮಸ್ಯೆ ಉದ್ಭವಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಮಳೆಯಾಗಿದೆ ಬೆಳೆಗೆ ಯೂರಿಯಾ ಬೇಕು. ಆದರೆ, ಯೂರಿಯಾ ಇಲ್ಲ ಎಂದು ಅಂಗಡಿಗಳಲ್ಲಿ ಹೇಳುತ್ತಿದ್ದಾರೆಂದು ನನ್ನ ಗಮನಕ್ಕೆ ತರುತ್ತಿದ್ದಾರೆ. ಸಾಧಾರಣವಾಗಿ ಈ ಋತುವಿಗೆ 8,50,000 ಮೆಟ್ರಿಕ್ ಟನ್‍ಗಳಷ್ಟು ಯೂರಿಯಾದ ಅವಶ್ಯಕತೆ ಇತ್ತು. ಆದರೆ, ನಿಮ್ಮ ವೈಬ್‍ಸೈಟ್‍ನ ಮಾಹಿತಿ ಪ್ರಕಾರ 8,95,221 ಮೆಟ್ರಿಕ್ ಟನ್‍ಗಳಷ್ಟು ಯೂರಿಯಾ ವಿತರಿಸಲಾಗಿದೆ. (01-04-2020ರಿಂದ06-09-2020ರವರೆಗೆ) ಹಾಗೂ 1,88,996 (06-09-2020 ರಂದು) ಮೆಟ್ರಿಕ್ ಟನ್‍ಗಳಷ್ಟು ಲಭ್ಯವಿದೆ ಎಂದು ಹೇಳಲಾಗುತ್ತಿದೆ.

ಆದರೆ, ಜನರು ಮಾತ್ರ ತಮಗೆ ಯೂರಿಯಾ ಸಿಗುತ್ತಿಲ್ಲವೆಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಹಾಗಾದರೆ, ಸಮಸ್ಯೆ ಮೂಲವಿರುವುದು ಎಲ್ಲಿ? ಕಾಳಸಂತೆಕೋರರು ಅಕ್ರಮವಾಗಿ ದಾಸ್ತಾನು ಮಾಡಿರಬೇಕು, ನಿಮ್ಮ ವೆಬ್‍ಸೈಟ್‍ನ ಅಂಕಿಅಂಶಗಳೇ ತಪ್ಪು ಇರಬೇಕು ಅಥವಾ ಜನರ ಬೇಡಿಕೆ ಹೆಚ್ಚಾಗಿರಬೇಕು. ಪರಿಶೀಲಿಸಿ ನೋಡಿದ್ರೆ ಈ 3 ಅಂಶಗಳೂ ನಿಜ ಇರುವಂತೆ ಕಾಣುತ್ತಿವೆ.

ಕೊರೊನಾ ಕಾರಣದಿಂದ ಲಾಕ್‍ಡೌನ್ ಹೇರಿದ್ದರಿಂದ ಜನರು ನಗರಗಳಿಂದ ವ್ಯಾಪಕವಾಗಿ ಗ್ರಾಮಾಂತರ ಪ್ರದೇಶಕ್ಕೆ ವಲಸೆ ಹೋದರು. ಹಾಗಾಗಿ, ಸಹಜವಾಗಿಯೇ ಕೃಷಿ ಕ್ಷೇತ್ರದ ಮೇಲೆ ಒತ್ತು ಬೀಳಲಾರಂಭಿಸಿತು. ಈ ವಿಚಾರವನ್ನು ಮನಗಂಡು ನಾವು ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಕ್ಕೆ ಮಾಡಿದ ಮನವಿ ಪತ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರವನ್ನು ದಾಸ್ತಾನು ಮಾಡಿಕೊಳ್ಳಬೇಕೆಂದು ಹಾಗೂ ಒದಗಿಸಬೇಕೆಂದು ಆಗ್ರಹಿಸಿದ್ದೆವು.

ಸರ್ಕಾರದ ಅಂಕಿಅಂಶಗಳ ಪ್ರಕಾರವೇ ಶೇ.20ರಷ್ಟು ಹೆಚ್ಚುವರಿ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಸರ್ಕಾರ ಇದೇ ರೀತಿಯ ನಿರ್ಲಕ್ಷ್ಯ ತೋರಿದ್ರೆ ಗೊಬ್ಬರಗಳಿಗೂ ರೈತರು ಪರದಾಡಬೇಕಾಗುತ್ತದೆ. ಬಿಜೆಪಿಯು ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ಕೀಟನಾಶಕ, ಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸಲಾಗದೆ ಸಂಘರ್ಷ ಉಂಟಾದ್ದರಿಂದ ಹಾವೇರಿಯಲ್ಲಿ ಗೋಲಿಬಾರ್ ನಡೆಸಿ ಇಬ್ಬರು ರೈತರನ್ನು ಕೊಲೆ ಮಾಡಲಾಯಿತು. ಅಂತಹ ಕೆಟ್ಟ ನೆನಪುಗಳು ಬೆನ್ನಿಗಿದ್ದರೂ ಸಹ ಗೊಬ್ಬರದಂತಹ ಮಹತ್ವವಾದ ವಿಷಯವನ್ನು ನಿಭಾಯಿಸಲಾಗದೇ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ. ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆಯು ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.

ಹೆಸರುಕಾಳು ಖರೀದಿ ಕೇಂದ್ರ: ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಹೆಸರು ಕಾಳಿಗೆ ₹7,196ಗಳನ್ನು ಕನಿಷ್ಠ ಬೆಂಬಲ ಬೆಲೆಯಾಗಿ ನಿಗದಿಪಡಿಸಿರುವುದರಿಂದ ಇಂದಿನಿಂದಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆಯೂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮುಂಗಾರಿನ ಮಳೆ ಚೆನ್ನಾಗಿದ್ದರಿಂದ ಹೆಸರು, ಉದ್ದು ಮುಂತಾದ ದ್ವಿದಳ ಧಾನ್ಯಗಳ ಬೆಳೆ ಉತ್ತಮವಾಗಿವೆ. ಕಳೆದ ಒಂದೂವರೆ ತಿಂಗಳಿನಿಂದ ಕೊಯ್ಲು ನಡೆಯುತ್ತಿದೆ. ರೈತರ ಶ್ರಮಕ್ಕೆ ಈ ಬೆಲೆ ಕಡಿಮೆಯೇ.. ಆದರೆ, ಅಷ್ಟಾದರೂ ಸಿಗಲಿ ಎಂದು ರೈತರು ನಿರೀಕ್ಷಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಹೆಸರು ಮತ್ತು ಉದ್ದು ಬೆಳೆಯನ್ನು ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ಪ್ರಸ್ತುತ ವಿವಿಧ ಎಪಿಎಂಸಿಗಳಲ್ಲಿ ಹೆಸರು ಕಾಳು ಕ್ವಿಂಟಾಲ್‍ಗೆ ರೂ.2,105 ಗಳಿಗೂ ಮಾರಾಟವಾಗುತ್ತಿದೆ. ಎಲ್ಲಾ ಮಾರುಕಟ್ಟೆಗಳ ಇಂದಿನ ಸರಾಸರಿ ಬೆಲೆ ರೂ.5,000 ಗಳ ಆಸುಪಾಸಿನಲ್ಲಿದೆ. ಹೆಸರನ್ನು ಕೊಯ್ಲು ಮಾಡಿ ಬಹಳ ದಿನಗಳ ಕಾಲ ರೈತರು ಮನೆಗಳಲ್ಲಿ ದಾಸ್ತಾನು ಮಾಡಲಾಗುವುದಿಲ್ಲ. ಹುಳದ ಕಾಟ ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ರೈತರು ಅಡ್ಡಾದಿಡ್ಡಿ ಬೆಲೆಗಳಿಗೆ ಮಾರಿಕೊಳ್ಳುತ್ತಿದ್ದಾರೆ.

ಸರ್ಕಾರ ಈವರೆಗೂ ಸಹ ಖರೀದಿ ಕೇಂದ್ರಗಳನ್ನು ತೆರೆಯದೇ ನಿರ್ಲಕ್ಷ್ಯ ಮಾಡುತ್ತಿರುವುದು ರೈತ ವಿರೋಧಿ ನಿಲುವಾಗಿದೆ. ಇಂತಹ ಸಂದರ್ಭದಲ್ಲಿ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿ ಎಪಿಎಂಸಿಗಳನ್ನೇ ಬರ್ಖಾಸ್ತು ಮಾಡಲು ಹೊರಟಿದೆ. ಕಳೆದ ಬಾರಿ ಸಹ ತೊಗರಿ ಖರೀದಿಯಲ್ಲೂ ಸರ್ಕಾರ ರೈತರಿಗೆ ಮೋಸ ಮಾಡಿತ್ತು.

ಕೇಂದ್ರ, ರಾಜ್ಯ ಎರಡೂ ಕಡೆ ಒಂದೇ ಪಕ್ಷದ ಆಡಳಿತವಿದೆ. ರಾಜ್ಯದ ಜನರು 25 ಜನ ಬಿಜೆಪಿ ಪಕ್ಷದ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ, ಒಬ್ಬರೂ ಸಹ ರೈತರ ಸಂಕಷ್ಟಕ್ಕೆ ಸ್ಪಂದಿಸದೇ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ.

ಈ ನಿರ್ಲಕ್ಷ್ಯ ಧೋರಣೆಯನ್ನು ಬಿಟ್ಟು ಸರ್ಕಾರ ಇಂದಿನಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಹೆಸರು ಕಾಳನ್ನು ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿ ಖರೀದಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.