ETV Bharat / state

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ - ಮಾಸಿಕ ಗೌರ ಧನ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ ಎಸ್‌ ​ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ..

Opposition leader Siddaramaiah
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
author img

By

Published : Jul 18, 2020, 2:23 PM IST

ಬೆಂಗಳೂರು : ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಸಂಬಂಧ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣ ಲೆಕ್ಕಿಸದೇ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಆದರೆ, ಅನಿವಾರ್ಯವಾಗಿ ಅವರು ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇದರಲ್ಲಿ ಅನೇಕರು ಕೋವಿಡ್ ಸೋಂಕು ತಗುಲಿದವರಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ಬರಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರ್ಕಾರ ಇವರನ್ನು ಕೊರೊನಾ ವಾರಿಯರ್ಸ್ ಎಂದು ಕರೆಯಿತು. ಪ್ರಧಾನಿ ಮೋದಿ ಅವರಾದಿಯಾಗಿ ಚಪ್ಪಾಳೆ ತಟ್ಟಿ ಹೂಮಳೆಗರೆದು. ಇದಕ್ಕೆ ಜನರು ಸಹ ಸಹಮತ ವ್ಯಕ್ತಪಡಿಸಿದರು. ಆದರೆ, ಅವರಿಗೆ ನೀಡುತ್ತಿರುವ ಮಾಸಿಕ ವೇತನ ಕೇವಲ ₹4,000 ರಿಂದ ₹ 6,000 ಮಾತ್ರ. ಸರ್ಕಾರ ₹8,000 ರಿಂದ ₹9,000 ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಈವರೆಗೂ ಕೂಡ 1 ರೂಪಾಯಿ ಕೂಡ ಹೆಚ್ಚಿಸಿಲ್ಲ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರ ಒಂದು ಬಾರಿ ವಿಶೇಷ ಪ್ಯಾಕೇಜ್ ಎಂದು ರಾಜ್ಯದ ಸಹಕಾರ ಇಲಾಖೆಯಿಂದ ₹3,000 ನೀಡುವುದಾಗಿ ಘೋಷಿಸಿತ್ತು. ಇದು ಶೇ.50%ರಷ್ಟು ಆಶಾ ಕಾರ್ಯಕರ್ತರಿಗೆ ತಲುಪಿಲ್ಲ ಎಂದು ವಿವರಿಸಿದ್ದಾರೆ.

Siddaramaiah's letter to the chief minister
ಸರ್ಕಾರಕ್ಕೆ ಸಿದ್ದರಾಮಯ್ಯ ಬರೆದಿರುವ ಪತ್ರ

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಕೂಡ ಸರಳವಾಗಿವೆ. ಮಾಸಿಕ ₹12000 ಗೌರವ ಧನ ಖಾತರಿಪಡಿಸಬೇಕು. ಕೋವಿಡ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಮತ್ತು ಕೋವಿಡ್-19 ಸೋಂಕಿಗೊಳಗಾದ ಆಶಾ ಪರಿಹಾರ ಸಂಪೂರ್ಣ ಚಿಕಿತ್ಸೆ ನೀಡಬೇಕಾಗಿದೆ. ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಅತ್ಯಂತ ಸಣ್ಣ ಮಟ್ಟದ್ದಾಗಿವೆ ಎಂದಿದ್ದಾರೆ.

ಆದ್ದರಿಂದ ಸರ್ಕಾರ ಸರಳವಾದ ಈ 2 ಬೇಡಿಕೆಗಳನ್ನು ಮಾನವೀಯವಾಗಿ ಪರಿಗಣಿಸಿ ಈಡೇರಿಸಬೇಕು. ಜನ ಸಂಕಷ್ಟದಲ್ಲಿರುವಾಗ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.