ETV Bharat / state

ಸುಸ್ತಾಗಿ ಬಿದ್ದಿದ್ದಲ್ಲ, ಕೊಂಚ ಹಿಂದಕ್ಕೆ ವಾಲಿದ್ದೇನೆ.. ಆತಂಕಪಡಬೇಕಿಲ್ಲ ಎಂದ ಸಿದ್ದರಾಮಯ್ಯ

ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಕಾರಿಗೆ ಹತ್ತುವಾಗ ಮುಗ್ಗರಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಟ್ವೀಟ್​ ಮಾಡುವ ಮೂಲಕ ನಾನು ಗಟ್ಟಿಮುಟ್ಟಾಗಿದ್ದೇನೆ. ಗಾಬರಿ ಪಡುವಂತದ್ದೇನಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Apr 29, 2023, 4:55 PM IST

ಬೆಂಗಳೂರು : ವಿಜಯನಗರ ಜಿಲ್ಲೆಯ ಕೂಡ್ಲಗಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ಕಾರಿಗೆ ಹತ್ತುವಾಗ ಹಿಂದಕ್ಕೆ ಮುಗ್ಗರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾರಿನಿಂದ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೇನೆ ಅಷ್ಟೇ, ಗಾಬರಿ ಪಡುವಂತದ್ದೇನಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ ಎಂದಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಎನ್.ಟಿ. ಶ್ರೀನಿವಾಸ್ ಪರವಾಗಿ ಇಂದು ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭ ಸಿದ್ದರಾಮಯ್ಯ ಅವರು ಬಿಸಿಲಿನ ತಾಪಕ್ಕೆ ತಾಳಲಾರದೇ ಕುಸಿದು ಬಿದ್ದರು ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಕಾರಿನ ಮುಂಬಾಗಿಲನ್ನು ಆಧಾರವಾಗಿಟ್ಟುಕೊಂಡು ಕಾಲಿಡುವ ಪಟ್ಟಿಯ ಮೇಲೆ ನಿಂತು ಜನರತ್ತ ಕೈಬೀಸುತ್ತಿದ್ದರು. ಬಳಿಕ ಕಾರಿನಲ್ಲಿ ಕುಳಿತುಕೊಳ್ಳಲು ಮುಂದಾಗಿದ್ದು, ಈ ವೇಳೆ ಆಯತಪ್ಪಿ ಹಿಂದಕ್ಕೆ ವಾಲಿದ್ದಾರೆ. ಜತೆಗೆ ಕಾಲು ಕೊಂಚ ಜಾರಿದೆ. ಇನ್ನೇನು ಸಿದ್ದರಾಮಯ್ಯ ಬಿದ್ದರು ಅಂದುಕೊಳ್ಳುವಷ್ಟರಲ್ಲಿ ಅಲ್ಲಿಂದ ಕಾಂಗ್ರೆಸ್ ನಾಯಕರು ಮತ್ತು ರಕ್ಷಣಾ ಸಿಬ್ಬಂದಿ ಅವರನ್ನು ಹಿಡಿದು, ಕಾರಿನೊಳಗೆ ಕೂರಲು ಅನುವು ಮಾಡಿಕೊಟ್ಟಿದ್ದಾರೆ.

  • ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.

    ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.

    ಈಗ ಆರಾಮಾಗಿದ್ದೇನೆ.
    ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">

ಸಿದ್ದರಾಮಯ್ಯ ಅವರು ಕಾರಿನಲ್ಲಿ ಕುಳಿತ ನಂತರ ಸ್ವತಃ ವೈದ್ಯರಾಗಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ ಅವರು ಗ್ಲುಕೋಸ್‌ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಮತ್ತೆ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸುತ್ತ ಹೆಲಿಪ್ಯಾಡ್‌ನಿಂದ ಪ್ರಚಾರಕ್ಕೆ ತೆರಳಿದ್ದಾರೆ. ಈ ಘಟನೆಯಿಂದ ಸಿದ್ದರಾಮಯ್ಯ ಕೊಂಚ ವಿಚಲಿತರಾದಂತೆ ಕಂಡುಬಂದರು. ಇದನ್ನೇ ಅನಾರೋಗ್ಯ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಲು ಆರಂಭವಾದಾಗ ಎಚ್ಚೆತ್ತುಕೊಂಡು ಟ್ವೀಟ್ ಮೂಲಕ ಸಮಜಾಯಿಷಿ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ವಿವಿಧ ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಚುನಾವಣಾ ಕಣ ರಂಗೇರಿದೆ. ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಭರ್ಜರಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್​ ನಾಯಕರಾದ ರಾಹುಲ್​ ಗಾಂಧಿ, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಜೆಡಿಎಸ್ ಪರವಾಗಿ​ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ, ಹೆಚ್​ ಡಿ ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ಕೂರುವ ವೇಳೆ ಸ್ಲಿಪ್​​​ ಆದ ಸಿದ್ದರಾಮಯ್ಯ: ನೀರು ಕೊಟ್ಟು ಆರೈಕೆ ಮಾಡಿದ ಸಹಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.