ETV Bharat / state

ಜಿಎಸ್​​ಟಿ ಪಾಲು ಸಿಗದ ಕರ್ನಾಟಕದ ಜನ ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ

ಜಿಎಸ್​​ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

tweet
ಸಿದ್ದರಾಮಯ್ಯ ಟ್ವೀಟ್​
author img

By

Published : Aug 28, 2020, 11:52 PM IST

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್​​ಟಿ ಪಾಲಿನ ಮೊತ್ತ ನೀಡುವುದಿಲ್ಲ ಎಂದು ಜಿಎಸ್​​ಟಿ ಕೌನ್ಸಿಲ್ ತಿಳಿಸಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

tweet
ಸಿದ್ದರಾಮಯ್ಯ ಟ್ವೀಟ್​

ಈ ಸಂಬಂಧ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಅವರು, ಜಿಎಸ್​​ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

tweet
ಸಿದ್ದರಾಮಯ್ಯ ಟ್ವೀಟ್​

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್​​ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

tweet
ಸಿದ್ದರಾಮಯ್ಯ ಟ್ವೀಟ್​
tweet
ಸಿದ್ದರಾಮಯ್ಯ ಟ್ವೀಟ್​

ಇದು ಯಾವೂರ ನ್ಯಾಯ;

ಸಂವಿಧಾನದ 101ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ ಜಿಎಸ್ ಟಿ ಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ. ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ. ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್​ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿ ನರೇಂದ್ರ ಮೋದಿ ಅವರೇ? ಎಂದು ಕೇಳಿದ್ದಾರೆ.

tweet
ಸಿದ್ದರಾಮಯ್ಯ ಟ್ವೀಟ್​

ಮೋಸ ಅಲ್ಲವೇ?:
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ. ಜಿಎಸ್​ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬೊಮ್ಮಾಯಿ ರಾಜ್ಯದಲ್ಲಿ ಜಿಎಸ್ ಟಿ ಸಂಗ್ರಹ ಶೇ.71ರಷ್ಟಾಗಿದೆ ಎಂದು ಹೇಳಿದ್ದಾರೆ.ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.