ETV Bharat / state

ಅನ್ನಭಾಗ್ಯ ಯೋಜನೆ ನಿಲ್ಲಿಸಲು ಬಿಜೆಪಿ ಸರ್ಕಾರದಿಂದ ಷಡ್ಯಂತ್ರ: ಸಿದ್ದರಾಮಯ್ಯ - ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ, ಎಚ್ಚರವಿರಲಿ- ಸಿದ್ದರಾಮಯ್ಯ ಟ್ವೀಟ್​

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Aug 24, 2022, 4:45 PM IST

ಬೆಂಗಳೂರು: ಅನ್ನಭಾಗ್ಯ ಯೋಜನೆ ನಿಲ್ಲಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಒಪ್ಪಿ ಅನುಷ್ಠಾನ ಮಾಡಲು ಮುಂದಾದರೆ ರಾಜ್ಯದಲ್ಲಿ ಈ ಯೋಜನೆ ಬಂದ್ ಆಗಲಿದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಅನ್ನಭಾಗ್ಯಕ್ಕೆ ಅಡ್ಡಗಾಲು ಹಾಕುತ್ತಲೇ ಇದ್ದ ಬಿಜೆಪಿ ನಾಯಕರು ಯೋಜನೆ ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ.

ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂ ಕೋರ್ಟ್​ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸಪಟ್ಟಿದ್ದಾರೆ. 2,65,000 ಕೋಟಿ ರೂ ಗಾತ್ರದ ಬಜೆಟ್​ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವ ಹಣ 2,800 ಕೋಟಿ ರೂ ಮಾತ್ರ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?, ಅಭಿವೃದ್ದಿ ಚಟುವಟಿಕೆಗಳು ಸ್ಥಗಿತಗೊಂಡು ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನೆನೆಗುದಿಗೆ ಬೀಳಲು ಕಾರಣ ಸರ್ಕಾರದ ಕಮಿಷನ್ ದಾಹ. 40% ಕಮಿಷನ್ ಈಗ 50%ಗೆ ಏರಿದೆಯಂತೆ. ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ: ಉಮೇಶ್ ಕತ್ತಿಯವರೇ, ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟು ಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ. ಎಚ್ಚರವಿರಲಿ ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕಮಿಷನ್​ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ, ತನಿಖೆಯಾಗಲಿ ಎಂದ ಸಿಎಂ ಬೊಮ್ಮಾಯಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.