ETV Bharat / state

ಅಗತ್ಯ ವಸ್ತುಗಳ ಬೆಲೆ ದಿಢೀರ್​​​ ಏರಿಕೆ: ಸೂಕ್ತ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಲಾಕ್​​ಡೌನ್ ಸಂದರ್ಭವನ್ನ ಬಂಡವಾಳವಾಗಿಸಿಕೊಂಡು ದಿಢೀರ್​ ಅಗತ್ಯ ವಸ್ತುಗಳ ಬೆಲೆ ಏರಿಸಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಸಿದ್ದರಾಮಯ್ಯ ಆಗಹ್ರಿಸಿದ್ದಾರೆ.

siddaramaih video  during lockdown
ಮಾಜಿ ಸಿಎಂ ಸಿದ್ದಾರಾಮಯ್ಯ ಹೇಳಿಕೆ
author img

By

Published : Apr 8, 2020, 3:59 PM IST

ಬೆಂಗಳೂರು: ಲಾಕ್​​ಡೌನ್​​ನಿಂದ ಬಡವರು ಹಾಗೂ ಮಧ್ಯಮ ವರ್ಗದ ಜನತೆ ತೊಂದರೆಯಲ್ಲಿದ್ದಾರೆ. ಈ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಾಪಾರಸ್ಥರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿದ್ದಾರೆ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಾಜಿ ಸಿಎಂ ಸಿದ್ದಾರಾಮಯ್ಯ

ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ? ಈಗಾಗಲೇ ಅವರಿಗೆ ದುಡಿಮೆ ಇಲ್ಲ, ಹಣವೂ ಇಲ್ಲ. ಈ ಕುರಿತು ಗಮನಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದಿದ್ದಾರೆ. ಹಣ್ಣು, ತರಕಾರಿ ಸೇರಿದಂತೆ ತಾವು ಬೆಳೆದಿರುವ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವವರೇ ಇಲ್ಲ ಎಂದು ಅನೇಕ ರೈತರು ಕರೆ ಮಾಡಿ ಹೇಳುತ್ತಿದ್ದಾರೆ. ಈ ಕುರಿತು ಸರ್ಕಾರ ಗಮನ ಹರಿಸಬೇಕು ಎಂದಿದ್ದಾರೆ.

ಬೆಳೆ ಹಾನಿ-ಪರಿಹಾರಕ್ಕೆ ಆಗ್ರಹ: ರಾಜ್ಯದ ವಿವಿಧೆಡೆ ಇತ್ತೀಚೆಗೆ ಭಾರಿ ಮಳೆಯಾಗಿದೆ. ಇದರಿಂದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ ಭತ್ತ, ಕಬ್ಬು, ಬಾಳೆ ಬೆಳೆಗೆ ಹಾನಿಯಾಗಿದೆ. ಎಲ್ಲೆಲ್ಲಿ ಹಾನಿಯಾಗಿದೆ ಅಲ್ಲಿ ಪರಿಹಾರ ಕೊಡಬೇಕು. ಬೆಳೆ ನಷ್ಟ ಕುರಿತು ಸಮೀಕ್ಷೆ ನಡೆಸಬೇಕು ಎಂದಿದ್ದಾರೆ.

ಸಂಸದರ ವೇತನ ಕಡಿತಕ್ಕೆ ಸಹಮತ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ದೂರವಾಣಿ ಕರೆ ಮಾಡಿ, ಶಾಸಕರು, ಸಂಸದರ ವೇತನ ಕಡಿತ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ನಮ್ಮ ಸಹಮತವೂ ಇದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಸಹಕರಿಸಬೇಕಾಗುತ್ತದೆ. ಇದಕ್ಕೆ ನಮ್ಮ ಒಪ್ಪಿಗೆಯೂ ಇದೆ ಎಂದಿದ್ದಾರೆ.

ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್​​ ದಾಖಲಿಸಲು ಆಗ್ರಹ: ಇತ್ತೀಚೆಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಕೆಲವರು ಮಾತನಾಡುತ್ತಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ಒಂದು ವೇಳೆ ನಿಜಾಮುದ್ದೀನ್‍ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ಮಾಹಿತಿ ನೀಡದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಆದರೆ, ಆ ವರ್ಗದವರನ್ನೇ ಗುರಿಯಾಗಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಇಡೀ ಸಮುದಾಯದವರನ್ನು ತಪ್ಪಿತಸ್ಥರಂತೆ ಕಾಣುವುದು ದುರುದ್ದೇಶಪೂರ್ವಕವಾದ ನಡವಳಿಕೆ ಎಂದ್ರು.

ಈ ಸಂಬಂಧ ಶಾಸಕರಾದ ರೇಣುಕಾಚಾರ್ಯ ಮತ್ತು ಯತ್ನಾಳ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್ ಕೇಸ್​ ದಾಖಲಿಸಿ ಬಂಧಿಸಬೇಕು. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಬೇಕು. ಅವರು ಏನೇ ಹೇಳಿಕೆ ಕೊಟ್ಟರೂ ಸಿಎಂ ಕೊಟ್ಟಂತೆ ಆಗುತ್ತದೆ. ಹೀಗಾಗಿ ಅವರು ಆ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ. ಶಾಸಕರಾದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಲು ಯಾವ ಕಾನೂನಿನಲ್ಲಿ ಅವಕಾಶವಿದೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ಸರ್ಕಾರಿ ನೌಕರರ ವೇತನ ಕಡಿತ ಬೇಡ: ಸಕಾರಿ ನೌಕರರ ವೇತನ ನಿಲ್ಲಿಸುವ ಅಥವಾ ಕಡಿತ ಮಾಡುವ ನಿರ್ಧಾರ ಸರಿಯಲ್ಲ. ಈಗಾಗಲೇ ಅವರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಅದು ಸಾಕು ಎಂಬುದು ನನ್ನ ಭಾವನೆ. ಬೇಕಾದರೆ ಸಂಸದರು, ಶಾಸಕರ ವೇತನವನ್ನು ಇನ್ನಷ್ಟು ಕಡಿತ ಮಾಡಲಿ. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ಮುಂದುವರೆದರೆ ಸಹಕಾರ: ಒಂದು ವೇಳೆ ಲಾಕ್‍ಡೌನ್ ಮುಂದುವರಿಸುವ ಅನಿವಾರ್ಯ ಪರಿಸ್ಥಿತಿ ಎದುರಾದರೆ ರಾಜ್ಯದ ಜನತೆ ಅದಕ್ಕೆ ಸಹಕಾರ ನೀಡಬೇಕು. ನಾವೂ ಸಹಕಾರ ನೀಡುತ್ತೇವೆ. ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಹೊರತುಪಡಿಸಿ ಲಾಕ್​ಡೌನ್ ಬಿಗಿ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.