ಬೆಂಗಳೂರು : ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಶೀಘ್ರ ಚೇತರಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾರೈಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೊರೊನಾ ಸೋಂಕಿಗೊಳಗಾದ ಸುದ್ದಿ ಕೇಳಿ ಬೇಸರವಾಯಿತು. ಆದಷ್ಟು ಬೇಗ ಅವರು ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಸೋಂಕಿಗೆ ಒಳಗಾಗಿದ್ದಾರೆ. ಅವರು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಉತ್ತಮ ಆರೋಗ್ಯದೊಂದಿಗೆ ಹಿಂದಿರುಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೊರೊನಾದಿಂದ ಚೇತರಿಸಿಕೊಳ್ಳಲಿ ಎಂದು ರಾಜ್ಯ ಕಾಂಗ್ರೆಸ್ನ ಹಲವು ನಾಯಕರು ಹಾರೈಸಿದ್ದಾರೆ.