ETV Bharat / state

ನಾನು ವಕೀಲಿಕೆ ಮರುಪ್ರಾರಂಭಿಸುತ್ತಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

author img

By

Published : Jan 25, 2020, 11:50 PM IST

ನನ್ನ ವಕೀಲಿಕೆ ಸನ್ನದು (ಎನ್ರೋಲ್ಮೆಂಟ್ ರಿನೀವಲ್) ಅಮಾನತನ್ನು ರದ್ದುಗೊಳಿಸುವಂತೆ ಬಾರ್ ಅಸೋಸಿಯೇಷನ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ನಾನು ವಕೀಲಿಕೆ ಮರು ಪ್ರಾರಂಭಿಸುತ್ತಿಲ್ಲ. ಅದು ಸಾಧ್ಯವೂ ಆಗುವುದಿಲ್ಲ. ಆದರೆ ನನ್ನ ಸನ್ನದು (ಎನ್ರೋಲ್ಮೆಂಟ್ ರಿನೀವಲ್) ಅಮಾನತು ಮಾಡಿದ್ದರು. ಆ ಅಮಾನತ್ತನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದೇನೆ. ಇಲ್ಲವಾದರೆ ನಾನು ವಕೀಲ ಎಂದು ಪರಿಗಣಿಸಲ್ಪಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಸಾಂವಿಧಾನಿಕ ಹುದ್ದೆಯಲ್ಲಿ ಇದ್ದಿದ್ದರಿಂದ ಬಾರ್ ಅಸೋಸಿಯೇಷನ್ ಸಿದ್ದರಾಮಯ್ಯ ಅವರ ವಕೀಲಿಕೆ ಸನ್ನದನ್ನು ಅಮಾನತಿನಲ್ಲಿ ಇಟ್ಟಿತ್ತು. ಇದೀಗ ಆ ಅಮಾನತ್ತನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪ್ಲೇಕಾರ್ಡ್ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ಆದರೆ ವಕಾಲತ್ತು ವಹಿಸುವವರನ್ನು ಬೆಂಬಲಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಶಿಕ್ಷಿಸಲೇಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ನಾನೇನು ಪ್ರತಿಕ್ರಿಯಿಸಲ್ಲ. ಅದು ಅವರ ಪಕ್ಷದ ಆಂತರಿಕ ವಿಷಯ ಎಂದರು.

Intro:Body:KN_BNG_02_SIDDARAMAYA_BYTE_SCRIPT_720195

ವಕೀಲಿಕೆ ಸನ್ನದು ಅಮಾನತು ರದ್ದತಿಗೆ ಅರ್ಜಿ ಸಲ್ಲಿಸಿದ್ದೇನೆ, ಆದರೆ ವಕೀಲಿಕೆ ಮರುಪ್ರಾರಂಭಿಸುತ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ನನ್ನ ವಕೀಲಿಕೆ ಸನ್ನದು ಅಮಾನತನ್ನು ರದ್ದುಗೊಳಿಸುವಂತೆ ಬಾರ್ ಅಸೋಸಿಯೇಷನ್ ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಚಾಮರಾಜಪೇಟೆಯಲ್ಲಿ ಮಾತನಾಡಿದ ಅವರು, ನಾನು ವಕೀಲಿಕೆ ಮರು ಪ್ರಾರಂಭಿಸುತ್ತಿಲ್ಲ. ಅದು ಸಾಧ್ಯವೂ ಆಗುವುದಿಲ್ಲ. ಆದರೆ ನನ್ನ ಸನ್ನದು (ಎನ್ ರೋಲ್ಮೆಂಟ್ ರಿನೀವಲ್) ಅಮಾನತು ಮಾಡಿದ್ದರು. ಆ ಅಮಾನತ್ತನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದೇನೆ. ಇಲ್ಲವಾದರೆ ನಾನು ವಕೀಲ ಎಂದು ಪರಿಗಣಿಸಲ್ಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಂವಿಧಾನಿಕ ಹುದ್ದೆಯಲ್ಲಿ ಇದ್ದಿದ್ದರಿಂದ ಬಾರ್ ಅಸೋಸಿಯೇಷನ್ ಸಿದ್ದರಾಮಯ್ಯ ಅವರ ವಕೀಲಿಕೆ ಸನ್ನದನ್ನು ಅಮಾನತಿನಲ್ಲಿ ಇಟ್ಟಿತ್ತು. ಇದೀಗ ಆ ಅಮಾನತ್ತನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ಆದರೆ ವಕಾಲತ್ತು ವಹಿಸುವವರನ್ನು ಬೆಂಬಲಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಶಿಕ್ಷಿಸಲೇ ಬೇಕು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ನಾನೇನು ಪ್ರತಿಕ್ರಯಿಸಲ್ಲ. ಅದು ಅವರ ಪಕ್ಷದ ಆಂತರಿಕ ವಿಷಯ ಎಂದು ವಿವರಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.