ಬೆಂಗಳೂರು: ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಈಗಷ್ಟೇ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಅಲ್ಲಿನ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ.
![ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್](https://etvbharatimages.akamaized.net/etvbharat/prod-images/02:57:14:1598606834_kn-bng-05-siddu-press-note-script-7208077_28082020144750_2808f_1598606270_965.png)
ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಯನ್ನು ಸರ್ಕಾರ ನಿರ್ಲಕ್ಷ್ಯದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡಪರ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಕೂಡ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.