ETV Bharat / state

ಮಾತೃಶ್ರೀ, ಸಾಂತ್ವಾನ ರದ್ದತಿ ವಾಪಸ್​, ಗ್ರಾಂ.ಪಂ. ಅವಧಿ ವಿಸ್ತರಿಸುವಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ - ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಗ್ರಾಮ ಪಂಚಾಯಿತಿಗಳ ಅವಧಿ ವಿಸ್ತರಣೆ, ಮಾತೃಶ್ರೀ, ಸಾಂತ್ವಾನ ಯೋಜನೆಗಳನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

Siddaramayya wrote a letter to CM Yediyurappa
ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
author img

By

Published : May 16, 2020, 6:05 PM IST

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಅವಧಿ ವಿಸ್ತರಣೆ, ಮಾತೃಶ್ರೀ ಮತ್ತು ಸಾಂತ್ವಾನ ಯೋಜನೆಗಳನ್ನು ಮುಂದುವರಿಸಿ ಕೊಂಡು ಹೋಗುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಕುರಿತು ಎರಡು ಪ್ರತ್ಯೇಕ ಪತ್ರಬರೆದಿರುವ ಸಿದ್ದರಾಮಯ್ಯ, ಗ್ರಾಮ ಪಂಚಾಯಿತಿ ಅವಧಿ ವಿಸ್ತರಣೆಯನ್ನು ಪ್ರಸ್ತಾಪಿಸಿದ್ದಾರೆ. ಗ್ರಾ. ಪಂ.ಗಳಿಗೆ ಆಯ್ಕೆಯಾಗುವ ಸದಸ್ಯರು ಯಾವುದೇ ಪಕ್ಷ, ಬಣಗಳಿಗೆ ಸೇರದೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಂವಿಧಾನದ ಮೂಲ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಅನ್ನು ಜಾರಿಗೆ ತರಲಾಯಿತು. 5 ವರ್ಷಗಳ ಹಿಂದೆ ರಾಜ್ಯದ 6,024 ಗ್ರಾ. ಪಂ.ಗಳಿಗೆ ನಡೆದ ಚುನಾವಣೆಗಳಲ್ಲಿ 9,7060 ಸದಸ್ಯರು ಆಯ್ಕೆಯಾಗಿದ್ದಾರೆ. ಬರ, ಪ್ರವಾಹ ಕಠಿಣ ಪರಿಸ್ಥಿತಿಯನ್ನು ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಸುಸೂತ್ರವಾಗಿ ನಿಭಾಯಿಸುವುದರ ಮೂಲಕ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್-19 ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹೀಗಾಗಿ, ಗ್ರಾಮೀಣ ಭಾಗದಲ್ಲಿ ಈ ಸೋಂಕು ತೀವ್ರವಾಗಿ ಹರಡುತ್ತಿಲ್ಲ. ನಗರಗಳಿಂದ ವ್ಯಾಪಕವಾಗಿ ಜನರು ಹಳ್ಳಿಗಳಿಗೆ ವಲಸೆ ಹೋದರೂ ಈ ಬೇಸಿಗೆಯಲ್ಲಿ ಕುಡಿಯುವ ನೀರು, ನೈರ್ಮಲ್ಯ ಮುಂತಾದ ಸಮಸ್ಯೆಗಳು ಸೃಷ್ಟಿಯಾಗದಂತೆ ಗ್ರಾ.ಪಂ.ಗಳು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿವೆ. ಈ ಸದಸ್ಯರುಗಳ ಅವಧಿ ಮುಂದಿನ ಒಂದೆರಡು ತಿಂಗಳಲ್ಲಿ ಮುಗಿಯುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಂವಿಧಾನದ ಅನುಚ್ಛೇದ 243ರ ಪ್ರಕಾರ, ಚುನಾವಣೆಗಳನ್ನು ನಿಗಧಿತ ಅವಧಿಯೊಳಗೆ ಕಡ್ಡಾಯವಾಗಿ ನಡೆಸಬೇಕಾಗಿರುತ್ತದೆ. ಕೊರೊನ ಹೆಸರು ಹೇಳಿಕೊಂಡು ಸರ್ಕಾರ ಚುನಾವಣೆಗಳನ್ನು ಮುಂದೂಡಲು ಪ್ರಯತ್ನಿಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಹ ನಿಗಧಿ ಪಡಿಸಿದ ಅವಧಿಯ ಒಳಗೆ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡಿವೆ. ಕೊರೊನಾ ಬಿಕ್ಕಟ್ಟಿನ ನೆಪದಲ್ಲಿ ಚುನಾವಣೆಗಳನ್ನು ನಡೆಸದೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮ ನಿರ್ದೇಶಿತ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

ಸರ್ಕಾರ ಒಂದು ವೇಳೆ ಹೀಗೆ ಮಾಡಿದ್ದೆಯಾದರೆ ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ. ಗ್ರಾ.ಪಂ.ಗಳ ಕಾರ್ಯ ವೈಖರಿಯ ಬಗ್ಗೆ ಏನೇನೂ ತಿಳಿವಳಿಕೆ ಇಲ್ಲದವರನ್ನು, ನಿರ್ಧಿಷ್ಠ ಸಿದ್ಧಾಂತಗಳ ಹಿನ್ನೆಲೆಯವರನ್ನು ಸೇರಿಸಿ ಆಡಳಿತ ಸಮಿತಿ ರಚಿಸಿದರೆ ಕೊರೊನಾದಂತಹ ಬಿಕ್ಕಟ್ಟನ್ನು ನಿಭಾಯಿಸಲು ಕಷ್ಟವಾಗುತ್ತದೆ. ಇದರಿಂದ ಗ್ರಾಮೀಣ ಕರ್ನಾಟಕ ಅನ್ಯಾಯಕ್ಕೆ ತುತ್ತಾಗುತ್ತದೆ ಎಂದು ಬೇಸರ ಹೊರ ಹಾಕಿದ್ದಾರೆ.

ಆದ್ದರಿಂದ ಯಾವುದೇ ಕಾರಣಕ್ಕೂ ಹೊಸ ಆಡಳಿತ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ಒಂದು ವೇಳೆ ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದ್ದಂತೆ ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲಾ ಗ್ರಾ. ಪಂ.ಗಳ ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು. ಅದರ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಮಾತೃಶ್ರೀ, ಸಾಂತ್ವಾನ ಯೋಜನೆ ಮುಂದುವರಿಸಿ:

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 50ರಷ್ಟು ಮಹಿಳಾ ಸಮೂಹವಿದೆ. ಮಹಿಳೆಯರ ಪ್ರಮುಖ ಸಮಸ್ಯೆಗಳಾದ ವರದಕ್ಷಿಣೆ ಕಿರುಕುಳ, ಲೈಂಗಿಕ ಹಲ್ಲೆ, ಕೌಟುಂಬಿಕ ಹಿಂಸೆ ಹಾಗೂ ಇತರೆ ದೌರ್ಜನ್ಯಗಳಿಗೆ ಒಳಪಟ್ಟ ಮಹಿಳೆಯರ ಸಮಸ್ಯೆಗಳಿಗೆ ಒಂದೆ ಸೂರಿನಡಿಯಲ್ಲಿ ಸ್ಪಂದಿಸಿ, ಅವರಿಗೆ ವೈದ್ಯಕೀಯ, ಕಾನೂನು, ಸಲಹೆ ಹಾಗೂ ಸಾಂತ್ವನವನ್ನು ನೀಡುವುದರ ಮೂಲಕ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ 2001-02ನೇ ಸಾಲಿನಿಂದ “ಸಾಂತ್ವಾನ” ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ 193 ಸಾಂತ್ವಾನ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ಕೇಂದ್ರದಲ್ಲೂ ಓರ್ವ ಸಮಾಲೋಚಕರು, ವಕೀಲರು ಸೇರಿದಂತೆ 4 ಜನ ಸರ್ಕಾರ ನೀಡುವ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತ ಬಂದಿದ್ದಾರೆ. ಆದರೆ, ಏಕಾಏಕಿ 2020ರ ಮೇ 12ರಂದು ರಾಜ್ಯ ಸರ್ಕಾರ ಕೊರೊನಾ ರೋಗದ ನೆಪವೊಡ್ಡಿ ಸಂಪನ್ಮೂಲಗಳ ಉಳಿತಾಯದ ನೆಪದಲ್ಲಿ ಎಲ್ಲಾ ಸಾಂತ್ವಾನ ಕೇಂದ್ರಗಳನ್ನು ರದ್ದುಪಡಿಸುವ ಆದೇಶ ಹೊರಡಿಸಿದೆ.

ಇದೇ ರೀತಿ ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತೆ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ತಲಾ 5,000 ರೂ.ಗಳ ಸಹಾಯಧನ ನೀಡುವ "ಮಾತೃಶ್ರೀ" ಯೋಜನೆಯನ್ನು 2018ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆಯಿಂದ ಅನೇಕ ಗರ್ಭಿಣಿ ಮತ್ತು ಬಾಣಂತಿಯರಿಗೆ ಉಪಯೋಗವಾಗಿ ಹೆರಿಗೆ ಸಂದರ್ಭದ ಸಾವಿನ ಪ್ರಮಾಣಗಳು ಗಣನೀಯವಾಗಿ ಕಡಿಮೆಯಾಗಿದ್ದವು. ಸಾಂತ್ವಾನ ಮತ್ತು ಮಾತೃಶ್ರೀಯಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಏಕಾಏಕಿ ರಾಜ್ಯ ಸರ್ಕಾರ ರದ್ದು ಗೊಳಿಸಿರುವುದು ಮಹಿಳಾ ಸಮೂಹಕ್ಕೆ ಮಾಡಿರುವ ದೊಡ್ಡ ದ್ರೋಹ, ಅನ್ಯಾಯವಾಗಿರುತ್ತದೆ. ಸರ್ಕಾರಕ್ಕೆ ಏನಾದರೂ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸಾಂತ್ವಾನ ಮತ್ತು ಮಾತೃಶ್ರೀ ಯೋಜನೆಗಳ ರದ್ದತಿಯನ್ನು ಹಿಂಪಡೆದು ಯಥಾಸ್ಥಿತಿ ಮುಂದುವರೆಸಬೇಕೆಂದು ಆಗ್ರಹಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.